ಚಿಕ್ಕಮಗಳೂರು

'ಪ್ರತಿಭಾವಂತರಿಗೆ ಶಿಕ್ಷಕರು, ಪೋಷಕರ ಸಹಕಾರ ಅಗತ್ಯ'

Published On :

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು, ಫೆ.16
ಮಕ್ಕಳಲ್ಲಿ ಪ್ರತಿಭೆ ಅಡಗಿರುತ್ತವೆ. ಅವುಗಳನ್ನು ಬೆಳಕಿಗೆ ತರಲು ಶಾಲೆಗಳು ಮತ್ತು ಶಿಕ್ಷಕರು ಹಾಗೂ ಪೋಷಕರು ಸೂಕ್ತ ವೇದಿಕೆ ಒದಗಿಸಿಕೊಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ್ ಹೇಳಿದ್ದಾರೆ.
ನಗರದ ವಿದ್ಯಾಭಾರತಿ ವಿದ್ಯಾ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಈಗಿನ ಮಕ್ಕಳು ಭಾರತದ ಭವಿಷ್ಯದ ವಿಜ್ಞಾನಿಗಳಾಗಲಿ ಹಾಗೂ ಭಾರತಕ್ಕೆ ವಿಜ್ಞಾನದ ಕೊಡುಗೆ ನೀಡಲಿ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಪ್ಪ ಅವರು ಕಾಯಕ್ರಮ ಉದ್ಘಾಟಿಸಿ ಮಾತನಾಡಿ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಉತ್ಸುಕತೆಯಿಂದ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಿದ್ದಾರೆ. ಇದು, ಜಿಲ್ಲೆಯಲ್ಲಿ ಮಾದರಿ ಸಂಸ್ಥೆಯಾಗಿರಲಿ ಎಂದು ಹೇಳಿದರು.
ನಗರಸಭಾ ಸದಸ್ಯ ಅಬ್ದುಲ್ ರೆಹಮಾನ್ ಖುರೇಷಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಶಾಲೆಯ ಮುಖ್ಯೋಪಾಧ್ಯಾಯ ಅಪ್ಸರ್ ಅಹಮದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.