ನಾಳೆಯಿಂದ ಕೃಷಿಮೇಳ
ಕಡೂರು: ಫೆ. 18ಹಾಗು 19ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಕಡೂರು ಸಮೀಪದ ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ಸನ್ನಿಧಿಯಲ್ಲಿ ತಾಲೂಕು ಮಟ್ಟದ ಕೃಷಿಮೇಳ ಜರುಗಲಿದೆ ಎಂದು ಯೋಜನೆಯ ತಾಲೂಕು ಸಂಯೋಜನಾಧಿಕಾರಿ ಎ.ದಿನೇಶ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮಾಭಿವೃದ್ದಿ ಯೋಜನೆ, ಹಿರೇನಲ್ಲೂರು ವಲಯದ ತಾಲೂಕು ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ,ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ಸನ್ನಿಧಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಸರ್ಕಾರಿ ಇಲಾಖೆಗಳು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಕೃಷಿ ಉತ್ಸವ ನಡೆಯಲಿದೆ.
ಫೆ. 18 ರಂದು ಕಡೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ.ಎಸಸ್ವಿ ದತ್ತರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು. 19ರ ಬುಧವಾರದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಯೋಜನೆಗಳ ಪ್ರದರ್ಶನ, ಯಂತ್ರೋಪಕರಣ ಪ್ರದರ್ಶನ, ವಿಚಾರಗೋಷ್ಟಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

