'ಮಕ್ಕಳ ಕಲಿಕೆಯತ್ತ ನಿಗಾ ವಹಿಸಲಿ'
ಕ.ಪ್ರ.ವಾರ್ತೆ, ಬೀರೂರು, ಫೆ.16
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಕಲಿಕೆಯ ಜೊತೆ ಸಂಸ್ಕಾರಯುತ ನೀತಿ ನಿಯಮಗಳ ಕಡೆಗೂ ಆದ್ಯತೆ ನೀಡಿ ಸತ್ಪ್ರಜೆಗಳಾಗಿ ರೂಪಿಸುವಲ್ಲಿ ಶಿಕ್ಷಕರಷ್ಟೆ ಅಲ್ಲದೇ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ಕುಮಾರ್ ಹೇಳಿದ್ದಾರೆ.
ಪಟ್ಟಣದ ಕೆ.ಚನ್ನವೀರಪ್ಪಯ್ಯ ಕಲ್ಯಾಣ ಮಂದಿರದ ಆವರಣದಲ್ಲಿ ಇತ್ತೀಚೆಗೆ ನಡೆದ ಶ್ರೀಅಕ್ಕಮಹಾದೇವಿ ಶಿಶು ಮಂದಿರ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಪೋಷಕರ ದಿನಾಚರಣೆ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಂಗ್ಲ ಭಾಷೆಯ ವ್ಯಾಮೋಹ ಬಿಟ್ಟು ನಮ್ಮ ಭಾಷೆಗಳಲ್ಲೇ ಕಲಿಯುವುದರ ಮೂಲಕ ಹೆಚ್ಚು ಅರ್ಥಪೂರ್ಣವನ್ನಾಗಿ ಭಾಷೆಯನ್ನು ಬೆಳೆಸಬೇಕು ಆಗ ಜ್ಞಾನ ಸಂಪಾದನೆ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ. ಪೋಷಕರು ಸಹ ಶಾಲೆಗೆ ಬಂದು ಮಕ್ಕಳ ಕಲಿಕೆ ಬಗ್ಗೆ ಗಮನಹರಿಸಿ ಅವರನ್ನು ತಿದ್ದುವ ಕೆಲಸ ಮಾಡಬೇಕು ಎಂದರು.
ಅಕ್ಕ ಮಹಾದೇವಿ ಮಹಿಳಾ ಸಮಾಜದ ಅಧ್ಯಕ್ಷೆ ಪತ್ರೆ ಶೈಲಜಾ ಸದಾಶಿವನ್ ಮಾತನಾಡಿ, ಈ ಶಾಲೆ 27 ವಸಂತಗಳನ್ನು ಪೂರೈಸಿ ನೂರಾರು ಬಡ ಮಕ್ಕಳಿಗೆ ವಿದ್ಯಾದಾನ ಮಾಡುತ್ತಿದ್ದು, ಒಂದು ಉತ್ತಮ ಶಾಲೆಯಾಗಿ ಬೆಳೆದಿರುವುದು ಪೋಷಕರ ಮತ್ತು ಶಾಲಾಭಿವೃದ್ಧಿ ಸಮಿತಿಯ ಶ್ರಮ ಎಂಬುದನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಎಚ್. ಶಾರದಾ ಆರಾಧ್ಯ ಮಾತನಾಡಿದರು. ಬೀರೂರು ವಲಯ ದೈಹಿಕ ಶಿಕ್ಷಕ ಪರಿವೀಕ್ಷಕ ಮಲ್ಲಪ್ಪ, ಶಾಲಾ ಕಾರ್ಯನಿರ್ವಣಾಧಿಕಾರಿ ಸಿ.ದಯಾನಂದ್, ಮುಖ್ಯ ಶಿಕ್ಷಕಿ ಗೌರಮ್ಮ ಮಾತನಾಡಿದರು.
ಕಳೆದ ಸಾಲಿನ 7ನೇ ತರಗತಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಪತ್ರೆ ಇಂದೂಮತಿ, ವನಜಾಕ್ಷಮ್ಮ, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಪ್ರೇಮ ಬಸವರಾಜ್ ಉಪಸ್ಥಿತರಿದ್ದರು. ಆರ್.ಎಚ್. ದಿಲೀಪ್ ಸ್ವಾಗತಿಸಿ, ಸುಧಾರಾಣಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

