ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
ಚಿಕ್ಕಮಗಳೂರು: ಗ್ರಾಮೀಣ ಅಂಚೆ ನೌಕರರನ್ನು ಪೌರ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು ನಗರದ ಪ್ರಧಾನ ಅಂಚೆ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು.
ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ಶೇಷಣ್ಣಗೌಡ ಅವರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿಯ ಧರಣಿಯನ್ನು ಕೈಗೊಳ್ಳಲಾಯಿತು.
ಕೆಂದ್ರದ 7ನೇ ವೇತನ ಆಯೋಗದ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕು. ಶೇ. 50 ರಷ್ಟು ತುಟ್ಟಿ ಭತ್ಯೆಯನ್ನು ಮೂಲ ವೇತನಕ್ಕೆ ಸೇರ್ಪಡೆಗೊಳಿಸಬೇಕು. ಅನುಕಂಪ ಆಧಾರದ ಉದ್ಯೋಗ ನೀಡಬೇಕು. ಪೋಸ್ಟ್ ಮ್ನಾನ್ ಮತ್ತು ಎಂಟಿಎಸ್ಗಳ ಶೇ.25 ರಷ್ಟು ಹುದ್ದೆಗಳನ್ನು ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ಕೊಡುವುದು. ಹೊರಗುತ್ತಿಗೆ ಆಧಾರದ ಮೇಲೆ ಶೇ.25 ರಷ್ಟು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಜಿಡಿಎಸ್ ನೌಕರರನ್ನೇ ಭರ್ತಿ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
2006 ರಿಂದ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ, ಕಾಂಟಿಜೆಂಡಿ, ಅರೇಕಾಲಿಕ ನೌಕರರಿಗೆ ದಿನಭತ್ಯೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಂಘದ ಖಜಾಂಚಿ ವಿರೂಪಾಕ್ಷ, ಉಪಾಧ್ಯಕ್ಷ ಕಡೂರಿನ ಗಂಗಾಧರ, ಮುಖಂಡರಾದ ಕಳಸದ ನಿರಂಜನಪ್ರಭು, ಸಿಂದಿಗೆರೆಯ ಸದಾಶಿವ, ತರೀಕೆರೆಯ ಶಿವಶಂಕರ, ಗಡಿಹಳ್ಳಿಯ ಮಂಜಪ್ಪ, ಬಾಳೂರಿನ ಸುರೇಶ್ ಹಾಗೂ ಗ್ರಾಮೀಣ ಅಂಚೆ ನೌಕರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

