'ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಿ'
ಕ.ಪ್ರ.ವಾರ್ತೆ, ಶೃಂಗೇರಿ, ಫೆ.19
ವಿದ್ಯಾರ್ಥಿಗಳು ತಮ್ಮ ಕಲಿಕೆಯ ದಿನಗಳಲ್ಲಿ ಪಠ್ಯೇತರ ಚಟುವಟಿಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸ.ಪ್ರ.ದ. ಕಾಲೇಜಿನ ಪ್ರಾಚಾರ್ಯ ಪ್ರೊ.ಕೆ.ಜಿ. ಸಿದ್ದಲಿಂಗೇಗೌಡ ಸಲಹೆ ನೀಡಿದರು.
ಅವರು ಪಟ್ಟಣದ ಜೆಸಿಬಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶೃಂಗಸಂಭ್ರಮ ಅತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕಾಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉತ್ತಮ ಮನಸ್ಥಿತಿ: ಇಂದಿನ ಮುಂದುವರೆದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇದೆ. ಕ್ರೀಡೆ, ಸಾಹಿತ್ಯ, ಸಾಸ್ಕೃತಿಕ ರಂಗಗಳಲ್ಲಿ ಆಸಕ್ತಿವಹಿಸಿ ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನವಾಗುವುದರ ಜೊತೆಗೆ ಮನಸ್ಥಿತಿಯೂ ಉತ್ತಮಗೊಳ್ಳುತ್ತದೆ ಎಂದರು.
ದೇಶದ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಉತ್ಸವ, ಸ್ಪರ್ಧೆಗಳ ಅನಿವಾರ್ಯತೆಯಿದೆ. ಇಂತಹ ಅಂತರ್ ಕಾಲೇಜು ಸ್ಪರ್ಧೆಗಳಿಂದ ಕಾಲೇಜು, ಕಾಲೇಜುಗಳ ನಡುವಣ ಮಧುರ ಬಾಂಧವ್ಯ ಹೆಚ್ಚುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಎಚ್.ಸಿ. ವೀರಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ಜೆಸಿಬಿಎಂ ಪದವಿ ಪೂರ್ವ ಕಾಲೇಜು ವಿಭಾಗದ ಪ್ರಾಚಾರ್ಯ ಡಾ.ಸಿ.ವಿ. ಗಿರಿಧರ ಶಾಸ್ತ್ರಿ, ಕೆ.ಎಸ್. ವೆಂಕಪ್ಪ, ಎನ್.ಎಚ್. ಲಕ್ಷ್ಮಿನಾರಾಯಣ, ಕೆ.ಎಸ್.ನಿಧಿ, ಸಾತ್ವಿಕ್ ಶೆಟ್ಟಿ, ವಿಶ್ವನಾಥ್ ಮೊದಲಾದವರು ಉಪಸ್ಥಿತರಿದ್ದರು. ಸಾಗರದ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

