ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ದಲಿತ- ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಿರಂತರವಾಗಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲಾ ರಕ್ಷಣಾ ಇಲಾಖೆ ಯಾವುದೇ ರೀತಿಯಲ್ಲಿ ಕ್ರಮಕ್ಕೆ ಮುಂದಾಗುತ್ತಿಲ್ಲ, ಈ ಮೂಲಕ ಜಾತಿ ವ್ಯವಸ್ಥೆಯನ್ನು ಬೆಂಬಲಿಸುತ್ತಿರುವುದು ದುರಾದೃಷ್ಟಕರ ಎಂದು ಹೇಳಿದ್ದಾರೆ.
ಇತ್ತೀಚೆಗೆ ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯಲ್ಲಿ ದಲಿತ ಯುವಕ ಕರಿಯಪ್ಪ ಎಂಬಾತನನ್ನು ಸವರ್ಣಿಯರಾದ ಲವ, ಕುಶ, ಬಿಜೆಪಿ ಮುಖಂಡರಾದ ಭಾನುಪ್ರಕಾಶ್, ರಾಮೇಗೌಡ, ಲಕ್ಷ್ಮೀಶ್, ಪ್ರಕಾಶ್, ನಾಗರಾಜ್ ಎಂಬುವವರು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಮಾರಾಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ. ಈ ಸಂಬಂಧ ಆರೋಪಿಗಳನ್ನು ರಕ್ಷಿಸಲು ರಾಜೀ ಸಂಧಾನಕ್ಕೆ ಮುಂದಾಗಿರುವ ಪೊಲೀಸರ ಕ್ರಮವನ್ನು ಒಕ್ಕೂಟ ಖಂಡಿಸುತ್ತದೆ ಎಂದಿದ್ದಾರೆ.
ಪದೇ ಪದೇ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ ನಡೆದ ಸಂದರ್ಭದಲ್ಲಿ ಪೊಲೀಸರು ರಾಜೀ ಸಂಧಾನಕ್ಕೆ ಪ್ರಯತ್ನಿಸುತ್ತಾರೆ. ಈ ಪ್ರಯತ್ನ ಯಶಸ್ವಿಯಾಗದೆ ಹೋದರೆ ಕೌಂಟರ್ ಕೇಸ್ ದಾಖಲಿಸಿ ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರಪನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಗೌಸ್ ಮೊಹಿಯುದ್ದೀನ್, ಅಂಗಡಿ ಚಂದ್ರು, ಮಂಜು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

