ಚಿಕ್ಕಮಗಳೂರು

ದೌರ್ಜನ್ಯ ತಡೆಗೆ ಒಗ್ಗಟ್ಟು ಅಗತ್ಯ: ನ್ಯಾ. ಜಯಲಕ್ಷ್ಮೀ

Published On :

ಕ.ಪ್ರ.ವಾರ್ತೆ, ತರೀಕೆರೆ, ಫೆ.25 ಮಕ್ಕಳ ಪಾಲನೆ ಮತ್ತು ಪೋಷಣೆ ಸರಿಯಾಗಿ ನಿರ್ವಹಿಸಬೇಕು ಎಂದು ಕಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಬಿ. ಜಯಲಕ್ಷ್ಮಿ ತಿಳಿಸಿದರು.
ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲೂಕು ಕಾನೂನು ಸೇವಾ ಸಮಿತಿ, ಶಿಕ್ಷಣ ಇಲಾಖೆ, ವಕೀಲರ ಸಂಘ ವತಿಯಿಂದ ಬಾಲನ್ಯಾಯ ಮಕ್ಕಳ ಲಾಲನೆ ಮತ್ತು ಪೋಷಣೆ ಕಾಯ್ದೆ 2000 ಹಾಗೂ ತಿದ್ದುಪಡಿ ಕಾಯ್ದೆ 2006ರ ಅನುಷ್ಠಾನ ಕುರಿತು ತಾಲೂಕೂ ಅನುಷ್ಠಾನ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, ಮಕ್ಕಳ ಮೇಲೆ ನಡೆಯುವ ದೌರ್ಜನ್ಯ, ಅತ್ಯಾಚಾರ ನಿಲ್ಲಬೇಕು, ಈ ನಿಟ್ಟಿನಲ್ಲಿ ಎಲ್ಲರ ಶ್ರಮ ಅಗತ್ಯ ಎಂದು ಅವರು ತಿಳಿಸಿದರು.
ಕಠಿಣ ಸಂದೇಶ: ಚಿಕ್ಕಮಗಳೂರು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಎಸ್. ಸುರೇಶ್ ಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜಘಾತುಕ ಶಕ್ತಿಗಳನ್ನು ತಡೆಯಬೇಕು, ಅತ್ಯಾಚಾರ ತಡೆಯಬೇಕು, ಕಠಿಣವಾದ ಶಿಕ್ಷೆಯಾಗುತ್ತದೆ ಎನ್ನುವ ಸಂದೇಶ ಹೋಗಬೇಕು, ಆಗ ಇಂತಹ ದುರ್ಘಟನೆ ತಪ್ಪುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಹೆಚ್ಚಿನ ತರಬೇತಿ ಪಡೆದು ಕಾರ್ಯಾಗಾರದ ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಎಪಿಪಿ ಬಿ.ಎಚ್. ಭಾಸ್ಕರ್, ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಶಿವಪ್ರಸಾದ್ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹರಿಪ್ರಸಾದ್, ಸಿಡಿಪಿಒ ಶ್ರೀಧರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜ್ಯೋತಿಲಕ್ಷ್ಮಿ, ರಮೇಶ್ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.