ಅಸಮರ್ಪಕ ವಿದ್ಯುತ್ ಪೂರೈಕೆ: ಮೆಸ್ಕಾಂಗೆ ಮುತ್ತಿಗೆ ಹಾಕಿ ಧರಣಿ
ಬಾಳೆಹೊನ್ನೂರು: ಬಾಳೆಹೊನ್ನೂರು ಸುತ್ತಮುತ್ತಲಿನ ಗ್ರಾಮೀಣ ಭಾಗದಲ್ಲಿ ಅನಿಯಮಿತ ವಿದ್ಯುತ್ ನಿಲುಗಡೆಯನ್ನು ಖಂಡಿಸಿ ನರಸಿಂಹರಾಜಪುರ ತಾಲೂಕು ಬಿಜೆಪಿ ಕಾರ್ಯಕರ್ತರು ಮಂಗಳವಾರ ಜೇಸಿ ವೃತ್ತದಿಂದ ಮೆಸ್ಕಾಂ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು.
ಇದೇ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಭಾಸ್ಕರ್ ವನಿಲ್ಲಾ ಮಾತನಾಡಿ, ಗ್ರಾಮೀಣ ಭಾಗದ ರೈತರಿಗೆ ಕೃಷಿ ಕಾರ್ಯಕ್ಕೆ ಈ 2 ತಿಂಗಳು ವಿದ್ಯುತ್‌ನ ಅಗತ್ಯ ಬಹಳವಿದೆ. ಅದೂ ಅಲ್ಲದೆ ಪರೀಕ್ಷೆಯ ಸಂದರ್ಭ ಇದಾಗಿರುವುದರಿಂದ ವಿದ್ಯಾರ್ಥಿಗಳ ರಾತ್ರಿ ವೇಳೆಯ ಅಭ್ಯಾಸಕ್ಕೂ ಸಹ ಮಿತಿಮೀರಿದ ವಿದ್ಯುತ್ ನಿಲುಗಡೆ ಮುಳುವಾಗಿದೆ ಎಂದು ಆರೋಪಿಸಿದರು.
ಪಕ್ಷದ ಜಿಲ್ಲಾ ಮುಖಂಡ ಕೆ.ಟಿ. ವೆಂಕಟೇಶ್ ಮಾತನಾಡಿ, ಸರ್ಕಾರ ಬರಿ ಪೊಳ್ಳು ಭರವಸೆಗಳನ್ನಷ್ಟೇ ನೀಡುತ್ತಿದೆ. ಬೇಸಿಗೆ ಕಾಲ ಬರುವ ಮೊದಲೇ ವಿದ್ಯುತ್ ಬರ ಎದುರಿಸುತ್ತಿರುವುದು ಮೆಸ್ಕಾಂನ ಕಾರ್ಯವೈಖರಿಯ ದೋಷ ಎಂಬುದು ಮೇಲ್ನೋಟಕ್ಕೆ ತಿಳಿಯುತ್ತದೆ ಎಂದು ಹೇಳಿದರು.
ಸಮೆಸ್ಕಾಂನ ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರತಿಭಟನಕಾರರ ಮನವಿ ಸ್ವೀಕರಿಸಿ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವುದಾಗಿ ತಿಳಿಸಿ ಪ್ರತಿಭಟನೆಯನ್ನು ಕೈ ಬಿಡುವಂತೆ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಹೋಬಳಿ ಕಾರ್ಯದರ್ಶಿ ಪ್ರಭಾಕರ್, ಹೋಬಳಿ ಅಧ್ಯಕ್ಷ ಕೆ.ಕೆ. ವೆಂಕಟೇಶ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಶ್ರಫ್, ಗ್ರಾ.ಪಂ. ಸದಸ್ಯ ಇಬ್ರಾಹಿಂ ಶಫಿ, ದಿನಕರ ಮೇಲ್ಪಾಲ್, ರತ್ನಾಕರ್, ರಘು ಮಾಗುಂಡಿ, ಅಬ್ಬು ಮಾಗುಂಡಿ, ಮಂಜೇಶ್ ಮಾಗುಂಡಿ, ರಾಯಪ್ಪ ಮಾಗುಂಡಿ, ಬನ್ನೂರು ರಾಜಪ್ಪ ಗೌಡ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

