ಚಿಕ್ಕಮಗಳೂರು

ನರಸಿಂಹರಾಜಪುರ ತಾಲೂಕಿನಲ್ಲಿ ಶ್ರದ್ಧಾ-ಭಕ್ತಿಯ ಶಿವಾರಾಧನೆ

Published On :

ನರಸಿಂಹರಾಜಪುರ:  ತಾಲೂಕಿನ ವಿವಿಧ ಈಶ್ವರ ದೇವಸ್ಥಾನಗಳಲ್ಲಿ ಗುರುವಾರ ಶಿವರಾತ್ರಿ ಪ್ರಯಕ್ತ ರುದ್ರಾಭಿಷೇಕ, ವಿಶೇಷ ಪೂಜೆ ನಡೆಯಿತು.
ಅಗ್ರಹಾರದ ಉಮಾ ಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ರುದ್ರಾಭಿಷೇಕ ವಿಶೇಷ ಪೂಜೆ ನಡೆಯಿತು. ಸಂಜೆ ಲಲಿತ ಭಜನಾ ಮಂಡಳಿಯವರಿಂದ ಭಜನೆ, ಶಿವ ಸಹಸ್ರ ನಾಮ ನಡೆಯಿತು. ಹಳೇ ಮಂಡಗದ್ದೆ ಸರ್ಕಲ್‌ನಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ ವಿಶೇಷ ಪೂಜೆ, ರುದ್ರಾಭಿಷೇಕ ನಡೆಯಿತು. ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭದ್ರಾವತಿ ವಿಕ್ರಂ ಮೆಲೋಡಿ ಅುವರಿಂದ ಆರ್ಕೇಸ್ಟ್ರಾ ನಡೆಯಿತು.
ಕೊಟ್ಟೂರು ಬಸವೇಶ್ವರ ದೇವಸ್ಥಾನ, ಹೆಬ್ಬೆ ಭವಾನಿ ಶಂಕರ ದೇವಸ್ಥಾನ, ಕುದುರೆಗುಂಡಿ ಅಶ್ವಗುಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಯಡಗೆರೆ ರಾಮನಾಥೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ರುದ್ರಾಭಿಷೇಕ,ರಂಗಪೂಜೆ ನಡೆಯಿತು.
ಗಂಗಾ ಜಲ ವಿತರಣೆ:  ಮುಜರಾಯಿ ಇಲಾಖೆಯಿಂದ ಬಂದಿದ್ದ ಗಂಗಾ ಜಲವನ್ನು ಉಮಾಮೇಶ್ವರ ದೇವಸ್ಥಾನ, ಸುಬ್ರಮಣ್ಯಸ್ವಾಮಿ ದೇವಸ್ಥಾನ, ಹಳೇ ಮಂಡಗದ್ದೆ ಸರ್ಕಲ್ ಈಶ್ವರ ದೇವಸ್ಥಾನ, ಹೆಬ್ಬೆ ಭವಾನಿ ಶಂಕರ ದೇವಸ್ಥಾನ ಹಾಗೂ ಕೊಟ್ಟೂರು ಬಸವೇಶ್ವರ ದೇವಸ್ಥಾನಕ್ಕೆ ತಾಲೂಕು ಕಚೇರಿಯಿಂದ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.