ಶಾಲೆಯಲ್ಲೇ ಜಾತಿ, ಆದಾಯ ಪ್ರಮಾಣಪತ್ರ ವಿತರಿಸಿ
ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ದೃಢೀಕರಣ ಪತ್ರಗಳನ್ನು ಆಯಾ ಶಾಲೆಗಳಲ್ಲಿಯೇ ವಿತರಿಸಲು ವ್ಯವಸ್ಥೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ದೃಢೀಕರಣ ಪತ್ರಗಳನ್ನು ಆಯಾ ಶಾಲೆಗಳಲ್ಲಿಯೇ ವಿತರಿಸಲು ಕಾರ್ಯಕ್ರಮ ರೂಪಿಸಿದೆ ಎಂದರು.
ಈ ಹಿನ್ನೆಲೆಯಲ್ಲಿ ಆಯಾ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಶಾಲೆಗಳಲ್ಲಿ ಪ್ರಮಾಣಪತ್ರ ಶೀಘ್ರದಲ್ಲಿ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರಸ್ತುತ ಸಾಲಿನಿಂದ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಶಾಲೆಗಳಲ್ಲಿಯೇ ವಿತರಣೆ ಮಾಡುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ತಾಲೂಕು ಕಚೇರಿಗೆ ಹೋಗುವುದು ತಪ್ಪಲಿದೆ ಎಂದರು.
ಏಜೆನ್ಸಿ ನೇಮಿಸಿ: ಎಲ್ಲಾ ಶಾಲೆಗಳಲ್ಲಿ ಮಾರ್ಚ್ 10 ರೊಳಗೆ ವಿದ್ಯಾರ್ಥಿಗಳ ಮಾಹಿತಿಯನ್ನು ದೃಢೀಕರಿಸಬೇಕೆಂದ ಅವರು, ಎಲ್ಲಾ ತಾಲೂಕು ಮಟ್ಟದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಡಾಟಾ ಎಂಟ್ರಿ ಮಾಡಲು ಏಜೆನ್ಸಿಗಳನ್ನು ನೇಮಕ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕೆ. ಚನ್ನಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

