ಸುದ್ದಿ ಸಂಕ್ಷೇಪ
ಮಾ.29ರಂದು ಗೋವಿಂದೇಗೌಡರಿಗೆ ಅಭಿನಂದನೆ, ಸನ್ಮಾನ
ಕೊಪ್ಪ: ಪಟ್ಟಣದಲ್ಲಿ ಮಾ.29 ರಂದು ಮಲೆನಾಡ ಗಾಂಧಿ ಎಚ್.ಜಿ. ಗೋವಿಂದೇಗೌಡ ಅವರಿಗೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ನಿರ್ಣಯಿಸಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಮೀಗಾ ಚಂದ್ರಶೇಖರ್ ತಿಳಿಸಿದ್ದಾರೆ.
ಇಂದು ಜಿಲ್ಲೆಗೆ ಲೋಕಾಯುಕ್ತರು
ಚಿಕ್ಕಮಗಳೂರು: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಇನ್ಸ್‌ಪೆಕ್ಟರ್ ಅವರು ಶುಕ್ರವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಕೊಪ್ಪ ಪ್ರವಾಸಿ ಮಂದಿರಕ್ಕೆ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಕಡೂರು ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಆಯಾ ತಾಲೂಕಿನ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸಗಳ ನಿಮಿತ್ತ ಅರ್ಜಿ/ದೂರು ಸಲ್ಲಿಸಿದ್ದು, ತಮ್ಮ ಅರ್ಜಿ/ ದೂರನ್ನು ಸಂಬಂಧಪಟ್ಟ ಅಧಿಕಾರಿಯು ವಿಲೇವಾರಿ ಮಾಡದೆ ಸಮಸ್ಯೆ ಬಗೆಹರಿಸದೆ ಇದ್ದಲ್ಲಿ ತಮ್ಮ ದೂರು ಸಲ್ಲಿಸಲು ಕೋರಲಾಗಿದೆ.
ಶುಲ್ಕ ಪಾವತಿಗೆ ಮಾ.5 ಕೊನೆ ದಿನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಿ.ಎ., ಬಿ.ಕಾಂ. ವಿದ್ಯಾರ್ಥಿಗಳಿಗೆ ಏ.15 ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ, ಪರೀಕ್ಷಾ ಶುಲ್ಕ ಪಾವತಿಸಲು ಮಾರ್ಚ್ 5 ಕೊನೆಯ ದಿನವಾಗಿದೆ ಹಾಗೂ 200 ದಂಡ ಶುಲ್ಕಗಳೊಂದಿಗೆ ಮಾರ್ಚ್ 15ರ ವರೆಗೆ ಪರೀಕ್ಷಾ ಶುಲ್ಕ ಪಾವತಿಸಬಹುದಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತಮ್ಮ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಾರಂಭವಾಗುವ ಎರಡು ದಿನಗಳ ಮುಂಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಪಿ.ಜಗದೀಶ್ (08262-220105, 8197818807) ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸೇವಾ ಕೃಪಾಂಕ
ಮೊರಾರ್ಜಿ ವಸತಿ ಶಾಲೆಯಲ್ಲಿ 2004ರಿಂದ 2011ರ ವರೆಗೆ ಹೊರ ಸಂಪನ್ಮೂಲ ಬೋಧಕ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಸೇವಾ ಕೃಪಾಂಕ ನೀಡಿ ಆಯ್ಕೆ ಪಟ್ಟಿ ಸಿದ್ಧಪಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರು ಅರ್ಜಿಗಳನ್ನು ಮಾ.5 ರೊಳಗೆ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ ಕಟ್ಟಡ, ಜ್ಯೋತಿ ನಗರ, ಚಿಕ್ಕಮಗಳೂರು ಇವರಿಗೆ ಸಲ್ಲಿಸಲು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

