ಸಾಹಿತ್ಯ ಸಿರಿ ಪ್ರಶಸ್ತಿಗೆ ಕೃಷ್ಣಮೂರ್ತಿ ಆಯ್ಕೆ
ಬಾಳೆಹೊನ್ನೂರು: ಬಾಳೆಹೊನ್ನೂರಿನಲ್ಲಿ ಮಾ. 5, 6 ರಂದು ನಡೆಯಲಿರುವ ನರಸಿಂಹರಾಜಪುರ ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ನೀಡಲಾಗುವ ಸಾಹಿತ್ಯ ಸಿರಿ ಪ್ರಶಸ್ತಿಗೆ ತಾಲೂಕಿನ ಸಾಹಿತಿ ಕರಗುಂದ ರಾಮಣ್ಣ ಆಯ್ಕೆಯಾಗಿದ್ದಾರೆ ಎಂದು ತಾಲೂಕು ಕಸಾಪ ಅಧ್ಯಕ್ಷ ಎಸ್.ಜಿ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ನರಸಿಂಹರಾಜಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ಜನಿಸಿದ ರಾಮಣ್ಣ ಅವರು, ಪ್ರಾಥಮಿಕ, ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಸ್ಥಳೀಯವಾಗಿ ಪಡೆದು ಎಂಎ(ಕನ್ನಡ), ಜಾನಪದ ವಿಶೇಷ ಅಧ್ಯಯನವನ್ನು ಮೈಸೂರು ವಿವಿಯಲ್ಲಿ ಮಾಡಿದ್ದಾರೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಮೃಣ್ಮಯ ಜಗತ್ತಿನ ನೂರು ಮುಖಗಳು, ಕರ್ಮಕಾಂಡ, ಮಧು ತುಂಬಿ ಎಂಬ ಕೃತಿಗಳನ್ನು ರಚಿಸಿ ಪ್ರಕಟಿಸಿದ್ದಾರೆ. ಇವರಿಗೆ ಮೈಸೂರು ಶಿಕ್ಷಣೋತ್ಥಾನ ಪ್ರತಿಷ್ಠಾನದಿಂದ ಶಿಕ್ಷಣ ರತ್ನ ಪ್ರಶಸ್ತಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಂಥಾಲಯ ಉತ್ತಮ ಸೇವಾ ಪುರಸ್ಕಾರ, ಉಡುಪಿಯ ಲಯನ್ಸ್ ಸಂಸ್ಥೆಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಅಲ್ಲದೆ, ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ, ಪುರಸ್ಕಾರ ಪಡೆದಿದ್ದಾರೆ.
ಒಕ್ಕಲಿಗ ವಾಣಿ ಪತ್ರಿಕೆಗೆ ಸಂಪಾದಕರಾಗಿಯೂ ಇವರು ಕಾರ್ಯನಿರ್ವಹಿಸಿದ್ದಾರೆ. ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿದೆ ಎಂದು ಎಸ್.ಜಿ. ಕೃಷ್ಣಮೂರ್ತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

