ಚಿಕ್ಕಮಗಳೂರು

ಮನೆ ಮುಂದೆ ನಿಲ್ಲಿಸಿದ್ದ ಬೈಕಿಗೆ ಬೆಂಕಿ

Published On :

ಚಿಕ್ಕಮಗಳೂರು: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಮಂಗಳವಾರ ನಗರದ ಹೊರ ವಲಯದಲ್ಲಿರುವ ಆದಿಶಕ್ತಿ ನಗರದಲ್ಲಿ ನಡೆದಿದೆ. ಹನೀಫ್ ಎಂಬವರಿಗೆ ಸೇರಿರುವ ಸುಮಾರು 50 ಸಾವಿರ ಮೌಲ್ಯದ ಬೈಕಿಗೆ ಬೆಂಕಿ ಹಚ್ಚಲಾಗಿದೆ. ಯುವಕರ ಗುಂಪೊಂದು ಹೊಸ ವರ್ಷಾಚರಣೆ ವೇಳೆಯಲ್ಲಿ ಈ ಕೃತ್ಯ ಎಸಗಿರಬಹುದೆಂದು ಹೇಳಲಾಗಿದೆ. ಮಂಗಳವಾರ ರಾತ್ರಿ ರವಿ ಎಂಬವರಿಗೆ ಕಿಶೋರ್, ವಿನೋದ್ ಹಾಗೂ ಜಗದೀಶ್ ಎಂಬವರು ಹಲ್ಲೆ ನಡೆಸಿದ್ದು, ಇದೇ ವೇಳೆಗೆ ಹನೀಫ್ ಎಂಬವರಿಗೆ ಸೇರಿದ ಬೈಕಿಗೆ ಬೆಂಕಿ ಹಚ್ಚಲಾಗಿದ್ದು, ಈ ಮೂವರು ತಾವು ತಂದ ಬೈಕನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ಮೂವರು ಕೃತ್ಯವನ್ನು ಎಸಗಿರಬಹುದೆಂದು ಹೇಳಲಾಗಿದ್ದು, ಹನೀಫ್ ನೀಡಿರುವ ದೂರಿನನ್ವಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.