ಚಿಕ್ಕಮಗಳೂರು

ವೈದ್ಯಾಧಿಕಾರಿ ನೇಮಕಕ್ಕೆ ಆಗ್ರಹ

Published On :

ಚಿಕ್ಕಮಗಳೂರು: ತಾಲೂಕಿನ ಕೆ.ಆರ್. ಪೇಟೆ ಗ್ರಾಪಂ ವ್ಯಾಪ್ತಿಯ ಬಿಗ್ಗನಹಳ್ಳಿ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಪೂರ್ಣಾವಧಿಯ ವೈದ್ಯಾಧಿಕಾರಿ ನೇಮಕ ಮಾಡುವಂತೆ ಕೆ.ಆರ್. ಪೇಟೆ ಗ್ರಾಪಂ ಅಧ್ಯಕ್ಷ ಟಿ.ಪಿ. ಪೂರ್ಣೇಶ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಇಲ್ಲಿನ ಆರೋಗ್ಯ ಕೇಂದ್ರದಲ್ಲಿ ಈ ಹಿಂದೆ ವೈದ್ಯಾಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಕಳೆದ ಒಂದು ವರ್ಷದಿಂದ ಇಲ್ಲಿನ ಸೇವೆ ರದ್ದುಪಡಿಸಲಾಗಿದ್ದು, ಇದರಿಂದಾಗಿ ಸುತ್ತಮುತ್ತಲ ಗ್ರಾಮಸ್ಥರುಗಳಿಗೆ ಚಿಕಿತ್ಸೆ ಪಡೆಯಲು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ವೈದ್ಯರು ಇಲ್ಲದಿರುವುದರ ಬಗ್ಗೆ ಇತ್ತೀಚೆಗೆ ನಡೆದ ಗ್ರಾಮಸಭೆಯಲ್ಲಿ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಜನಪ್ರತಿನಿಧಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇಲ್ಲಿಗೆ ಪೂರ್ಣಾವಧಿ ವೈದ್ಯರು ನೇಮಕ ಮಾಡದೆ ಹೋದರೆ ಮುಂದಿನ ದಿನಗಳಲ್ಲಿ ಗ್ರಾಪಂ ಜನಪ್ರತಿನಿಧಿಗಳು ಸೇರಿದಂತೆ ಗ್ರಾಮಸ್ಥರ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.