ಚಿಕ್ಕಮಗಳೂರು

ಹೊಸ ವರ್ಷದ ಸಂಭ್ರಮ...

Published On :

ಮೂಡಿಗೆರೆ: ಜೆಸಿಐ ಸಂಸ್ಥೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ಆಶ್ರಯದಲ್ಲಿ ಡಿ31ರಂದು ಅಡ್ಯಂತಾಯ ರಂಗಮಂದಿರದಲ್ಲಿ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹೊಸ ವರ್ಷಕ್ಕೆ ಸ್ವಾಗತ ಕೋರುವ ಹಿನ್ನೆಲೆಯಲ್ಲಿ ಶಾಸಕ ಬಿ.ಬಿ. ನಿಂಗಯ್ಯ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಜೆಸಿಐ ಅಧ್ಯಕ್ಷ ಗೌಡಹಳ್ಳಿ ಪ್ರಸನ್ನ, ಕಸಾಪ ಅಧ್ಯಕ್ಷ ಅಶೋಕ್, ಆಕಾಶದಲ್ಲಿ ತೇಲಾಡುವ ರಂಗುರಂಗಿನ ಬಣ್ಣದ ಬುಟ್ಟಿಗಳಿಗೆ ದೀಪ ಹಚ್ಚುವ ಮೂಲಕ ಆಕಾಶಕ್ಕೆ ತೇಲಿಸುವುದರ ಮೂಲಕ ಉದ್ಘಾಟಿಸಿದರು.
ಮೇಘಾಲಯ ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳು ಮತ್ತು ಮೇಘಾಲಯ ನೃತ್ಯ ಕಾರ್ಯಕ್ರಮ ನೆರೆದಿದ್ದ ಸಭಿಕರ ಮನಗೆದ್ದವು. ಪ್ರಶಸ್ತಿ ವಿಜೇತ ಪ್ರಸಿದ್ಧ ನೃತ್ಯ ತಂಡದವರಿಂದ, ಸ್ಥಳೀಯ ಕಲಾವಿದರಿಂದ, ಆಕರ್ಷಕ ಸಾಂಸ್ಕೃತಿಕ ನೃತ್ಯ ಪ್ರದರ್ಶನವಿತ್ತು.
ಮಲೆನಾಡಿನ ವಿವಿಧ ಖಾದ್ಯಗಳ ಮಳಿಗೆ, ಸಾಂಪ್ರದಾಯಿಕ ನಿಶಾನಿ ವಾದ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಹೊಸ ವರ್ಷವನ್ನು ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.