ಚಿಕ್ಕಮಗಳೂರು

4ರಂದು ಜನಸ್ಪಂದನ

Published On :

ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾ ಮತ್ತು ತಾಪಂ ಸಹಯೋಗದೊಂದಿಗೆ ಚಿಕ್ಕಮಗಳೂರು ತಾಲೂಕಿನ ಬ್ಯಾರವಳ್ಳಿ (ಮಲ್ಲಂದೂರು) ಗ್ರಾಮ ಪಂಚಾಯಿತಿಯ ಜನಸ್ಪಂದನ ಕಾರ್ಯಕ್ರಮ ಜ. 4 ರಂದು ಬೆಳಗ್ಗೆ 11 ಗಂಟೆಗೆ ಬ್ಯಾರವಳ್ಳಿ (ಮಲ್ಲಂದೂರು) ಗ್ರಾಪಂ ಕಚೇರಿ ಆವರಣದಲ್ಲಿ ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಷ್ಯ ವೇತನಕ್ಕೆ ಅರ್ಜಿ
ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಘಟಕದ ವತಿಯಿಂದ 2013- 14ನೇ ಸಾಲಿಗೆ ಎಂಫಿಲ್ ಮತ್ತು ಪಿಎಚ್‌ಡಿ ಕಿರಿಯ ಸಂಶೋಧನಾ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಂಶೋಧನಾರ್ಥಿಗಳು ಜ.15 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಚಾಲಕರು, ಪರಿಶಿಷ್ಟ ಜಾತಿ, ಪರಿಶಿಷ್ಟ  ಪಂಗಡಗಳ ಅಭಿವೃದ್ಧಿ ಘಟಕ, ಕುವೆಂಪು ವಿಶ್ವವಿದ್ಯಾನಿಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ, ದೂ. 08282- 256329 (ಕಚೇರಿ)ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.