ಚಿಕ್ಕಮಗಳೂರು

'ಅನುದಾನ ಬಳಕೆ ಸಮರ್ಪಕವಾಗಿರಲಿ'

Published On :

ಚಿಕ್ಕಮಗಳೂರು: ಯಾವುದೇ ಅನುದಾನವಾಗಿರಲಿ ಉದ್ದೇಶಿತ ಕಾರ್ಯಗಳಿಗೆ ಸರಿಯಾದ ರೀತಿಯಲ್ಲಿ ಬಳಕೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಹೇಳಿದ್ದಾರೆ.
ಸಖರಾಯಪಟ್ಟಣ ಅಂತರಘಟ್ಟಮ್ಮ ದೇವಾಲಯ ಸಮುದಾಯ ಭವನ ಅಭಿವೃದ್ಧಿಗೆ ತಮ್ಮ ಶಾಸಕರ ನಿಧಿಯಿಂದ 2 ಲಕ್ಷ ಅನುದಾನ ನೀಡಿದ್ದಕ್ಕಾಗಿ ದೇವಾಲಯ ಆಡಳಿತ ಮಂಡಳಿ ಮಂಗಳವಾರ ಸಂಜೆ ತಮ್ಮ ನಿವಾಸದ ಕಚೇರಿಯಲ್ಲಿ ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಇದು ನಮ್ಮ ಕರ್ತವ್ಯ. ಸನ್ಮಾನ, ಅಭಿನಂದನೆಯ ಅಗತ್ಯವಿಲ್ಲ. ದೇವಾಲಯ ಆಡಳಿತ ಮಂಡಳಿ ಮತ್ತು ಗ್ರಾಮದ ಪ್ರಮುಖರು ಮನವಿ ಮಾಡಿಕೊಂಡಿದ್ದಕ್ಕೆ ತಾವು ಸ್ಪಂದಿಸಿರುವುದಾಗಿ ತಿಳಿಸಿದರು.
ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಜನರಿಗೆ ತಲುಪಿಸುವ ಕಾರ್ಯ ಎಲ್ಲರಿಂದ ನಡೆಯಬೇಕು. ಯೋಜನೆಗಳ ಉಪಯೋಗ ಅರ್ಹ ಫಲಾನುಭವಿಗಳಿಗೆ ದೊರಕುವಂತೆ ಎಲ್ಲರೂ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ ಎಂದ ಅವರು, ಅಭಿಮಾನದಿಂದ ನೀಡಿರುವ ಗೌರವಕ್ಕೆ ತಕ್ಕಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಗೇಗೌಡ ಮಾತನಾಡಿದರು.
ದೇವಾಲಯ ಸಮಿತಿ ಅಧ್ಯಕ್ಷ ಎಸ್.ಆರ್. ಯೋಗೇಂದ್ರಗೌಡ, ಉಪಾಧ್ಯಕ್ಷ ಆರ್. ಚಂದ್ರಶೇಖರಪ್ಪ, ಖಜಾಂಚಿ ಬಸಪ್ಪ ಅವರು ಸನ್ಮಾನಿಸಿದರು.
ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್, ಮುಖಂಡರಾದ ರತ್ನಾಕುಮಾರ್, ಕೆ.ಟಿ. ಮಂಜುನಾಥ್, ಶ್ರೀಕಾಂತ್, ವೆಂಕಟೇಶ್, ಎಸ್.ಆರ್. ಸತೀಶ್, ರಾಮಣ್ಣ, ಗಣೇಶ್, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.