ಸಹಕಾರ ಸಂಘದ ಚುನಾವಣೆ
ಚಿಕ್ಕಮಗಳೂರು: ನೋಂದಣಿಯಾದ ಸಹಕಾರ ಸಂಘಗಳ ಪೈಕಿ 154 ಸಹಕಾರ ಸಂಘಗಳ ಆಡಳಿತ ಮಂಡಳಿಗಳಿಗೆ ಮಾ.31ರೊಳಗೆ ಚುನಾವಣೆ ನಡೆಸಲಾಗುವುದು. ವಿವಿಧ ಸಹಕಾರ ಸಂಘಗಳಿಗೆ ಚುನಾವಣೆ ನಡೆಸಲು ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಫೆ.2ರಂದು ಹಾಲು ಉತ್ಪಾದಕರ ಸಹಕಾರ ಸಂಘಗಳ ಚುನಾವಣೆ, ಫೆ.9ರಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಫೆ.16, 17ರಂದು ಪಟ್ಟಣ ಸಹಕಾರ ಬ್ಯಾಂಕುಗಳು, ಗ್ರಾಹಕರ ಸಹಕಾರ ಸಂಘಗಳು, ಪಿಕಾರ್ಡ್ ಬ್ಯಾಂಕುಗಳು, ನೌಕರರ ಪತ್ತಿನ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು, ಇತರೆ ಪತ್ತಿನ ಸಹಕಾರ ಸಂಘಗಳ, ಫೆ.23ರಂದು ಗೃಹ ನಿರ್ಮಾಣ ಸಹಕಾರ ಸಂಘಗಳು ಎಲ್ಲಾ ಪತ್ಯೇತರ ಸಹಕಾರ ಸಂಘಗಳು, ಇತರೆ ಎಲ್ಲಾ ಸಹಕಾರ ಸಂಘಗಳಿಗೆ ಚುನಾವಣೆ ನಡೆಯಲಿದೆ. ಇತರೆ ಸಹಕಾರ ಸಂಘಗಳಿಗೆ ಮಾ. 2 ರಂದು ಚುನಾವಣೆ ನಡೆಸಲಾಗುವುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ
ಚಿಕ್ಕಮಗಳೂರು: ತಾಲೂಕಿನ ಕೆ.ಆರ್. ಪೇಟೆ ಗ್ರಾಪಂ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಯ ನೇಮಕಾತಿಗಾಗಿ ಪ್ರ- ವರ್ಗ 2ಎ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಮುಖ್ಯ ಗ್ರಂಥಾಲಯಾಧಿಕಾರಿಗಳು, ಜಿಲ್ಲಾ ಕೇಂದ್ರ ಗ್ರಂಥಾಲಯದಿಂದ ಪಡೆದು ಜ. 13 ರೊಳಗೆ ಸಲ್ಲಿಸಬಹುದು. ವಯೋವುತಿ 18 ರಿಂದ 36 ವರ್ಷ. ತಹಸೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ತಹಸೀಲ್ದಾರರಿಂದ ಉದ್ಯೋಗಕ್ಕಾಗಿ ಎಂದು ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ ಮತ್ತು ಪಡಿತರ ಚೀಟಿ ಪ್ರತಿಗಳನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳು, ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

