ಚಿಕ್ಕಮಗಳೂರು

ಗ್ರಾಪಂ ಸದಸ್ಯನ ವಿರುದ್ಧ ಸುಳ್ಳು ಕೇಸ್: ಪ್ರತಿಭಟನೆ

Published On :

ಕ.ಪ್ರ.ವಾರ್ತೆ,ಶೃಂಗೇರಿ,ಜ.2
ಬೇಗಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸುರೇಶ್ ಜಟಿಗೇಶ್ವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿರುವುದನ್ನು ಪ್ರತಿಭಟಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗ್ಗೆ ಪಟ್ಟಣದ ನೂತನ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಸಂತೆ ಮಾರುಕಟ್ಟೆ ಬಳಿ ಸಮಾವೇಶಗೊಂಡಿತು.
ತಾಲೂಕು ಬಿಜೆಪಿ ಅಧ್ಯಕ್ಷ ನಟೇಶ್ ಮಾತನಾಡಿ, ರಾಜಕೀಯ ದುರುದ್ದೇಶದಿಂದ ಅಟ್ರಾಸಿಟಿ ಕಾನೂನಿನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬೇಗಾರು ಗ್ರಾಪಂ ಸದಸ್ಯ ಸುರೇಶ್ ವಿರುದ್ಧ ಸುಳ್ಳು ಪ್ರಕರಣ ದಾಖಸಿದ್ದಾರೆ. ಕಾಂಗ್ರೆಸ್‌ನ 2ನೇ ದರ್ಜೆಯ ನಾಯಕರು ಸ್ಥಳೀಯವಾಗಿ ರಾಜಕೀಯ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಪಕ್ಷ ಖಂಡಿಸುತ್ತದೆ. ಕೂಡಲೇ ಈ ಪ್ರಕರಣ ಹಿಂಪಡೆಯಬೇಕು. ಇಂತಹ ಕೀಳುಮಟ್ಟದ ರಾಜಕಾರಣ ನಿಲ್ಲಿಸಬೇಕು ಎಂದರು.
ಜಿಪಂ ಮಾಜಿ ಅಧ್ಯಕ್ಷ ಮಾವಿನಕಾಡು ರಂಗನಾಥ್, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಎ.ಎಸ್. ನಯನ, ತಾಪಂ ಮಾಜಿ ಅಧ್ಯಕ್ಷ ನೂತನ್ ಕುಮಾರ್, ಪೂರ್ಣಪಲ, ಪ್ರದೀಪ್, ಮುರುಳೀಧರ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಅನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.