ಚಿಕ್ಕಮಗಳೂರು

ಆರ್ಟಿಐ ವರದಾನ: ಡಿಸಿ

Published On :

ಚಿಕ್ಕಮಗಳೂರು:  ಸರ್ಕಾರದ ಮಾಹಿತಿ ಹಕ್ಕು ಕಾಯ್ದೆ ಜನಸಾಮಾನ್ಯರಿಗೆ ವರದಾನವಾಗಿ ಪರಿಣಮಿಸಿದೆ ಇದನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಟಾನಕ್ಕೆ ತರಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಅಧಿಕಾರಿಗಳಿಗೆ ಶುಕ್ರವಾರ ಏರ್ಪಡಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ- 2005 ಕುರಿತ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಏನೆಲ್ಲಾ ಕೆಲಸ ಮಾಡುತ್ತಿದೆ ಎಂಬುದನ್ನು ಅರಿಯುವುದು ತಿಳಿದುಕೊಳ್ಳಲು ಪ್ರತಿಯೊಬ್ಬ ಪ್ರಜೆಗೂ ಹಕ್ಕಿದೆ. ಮಾಹಿತಿ ಹಕ್ಕು ಕಾಯ್ದೆ ಪರಿಣಾಮವಾಗಿ ಶ್ರೀಸಾಮಾನ್ಯರೂ ಸಹ ಅರ್ಜಿ ಸಲ್ಲಿಸಿ ಸರ್ಕಾರದ ಆಗು ಹೋಗುಗಳ ಮಾಹಿತಿ ಪಡೆಯಬಹುದಾಗಿದೆ ಎಂದರು.
ಈ ಕಾಯ್ದೆ ಜಾರಿ ನಂತರ ಆಡಳಿತ ವ್ಯವಸ್ಥೆಯಲ್ಲಿದ್ದ ವಿಳಂಭ ನೀತಿ ನಿವಾರಣೆ ಆಗಿದೆ. ಈ ಕಾರ್ಯಗಾರದಲ್ಲಿ ಭಾಗವಹಿಸಿದ ಅಧಿಕಾರಿಗಳು ತರಬೇತಿ ಸಮಯದಲ್ಲಿ ಅನುಷ್ಟಾನದ ಬಗ್ಗೆ ಸೂಕ್ತ ಮಾಹಿತಿ ಪಡೆದುಕೊಂಡು ಅರ್ಜಿದಾರರಿಗೆ ನ್ಯಾಯ ಒದಗಿಸುವ ಪರಿಪಾಠ ಬೆಳೆಸಿಕೊಳ್ಳಬೇಕೆಂದರು.
ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿಯ ಕಾರ್ಯನಿರ್ವಹಣೆಗೆ ಪಾರದರ್ಶಕತೆಯನ್ನು ತರುವುದರ ಜೊತೆಗೆ ಜವಬ್ದಾರಿ ಭಾವನೆಯನ್ನು ಮಾಹಿತಿ ಹಕ್ಕು ಕಾಯಿದೆ ಹೆಚ್ಚಿಸುವುದು ಎಂದ ಅವರು, ಸರ್ಕಾರ ನೀಡಿರುವ ನಿರ್ದೇಶನ ರೀತಿಯಲ್ಲಿ ನಿರ್ವಹಿಸಿದ್ದರೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ತರಬೇತಿ ಪ್ರಮುಖ ಅಂಗವಾಗಿದ್ದು, ದಿನನಿತ್ಯದ ಸರ್ಕಾರಿ ಕೆಲಸ ಕಾರ್ಯಗಳನ್ನು ಸುಗಮವಾಗಿ ಕಾರ್ಯ ನಿರ್ವಹಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನ ಕ್ರಿಯೇಟ್ ಸಂಸ್ಥೆಯ ವೈ.ಜಿ. ಮುರಳಿಧರನ್ ರವರು ಮಾಹಿತಿ ಹಕ್ಕು ಅಧಿನಿಯಮದ ಪರಿಚಯ ಮತ್ತು ಅದರ ಪ್ರಾಮುಖ್ಯತೆ ಹಾಗೂ ಸೆಕ್ಷನ್ 4 (ಬಿ) ಸಿದ್ದ ಮಾಡುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ರಾಜ್ಗೋಪಾಲ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.