ಕಮಾನು ಧ್ವಂಸ: ಒಬ್ಬ ಸೆರೆ
ಕ.ಪ್ರ.ವಾರ್ತೆ ಟಿ ಮೂಡಿಗೆರೆ ಟಿ ಜ.3
ಇಲ್ಲಿಗೆ ಸಮೀಪದ ಸುಭಾಷ್ನಗರದಲ್ಲಿ ನಿರ್ಮಾಣದ ಹಂತದಲ್ಲಿದ್ದ ಏಳುಮುಖ ಚೌಡೇಶ್ವರಿ ದೇವಾಲಯದ ಕಮಾನನ್ನು ಮೂವರು ಕಿಡಿಗೇಡಿಗಳು ಶುಕ್ರವಾರ ಬೆಳಗಿನ ಜಾವ ಧ್ವಂಸಗೊಳಿಸಿದ್ದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.
ಸಕಾಲಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ ಪೊಲೀಸರು ಈ ಸಂಬಂಧ ಬಾಬಾ ಎಂಬವನನ್ನು ವಶಪಡಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಅಲ್ತಾಫ್ ಬಳಗುಳ, ಹಮೀದ್ ಎಂಬವರ ಪತ್ತೆಗೆ ಕ್ರಮ ಜರುಗಿಸಿದ್ದಾರೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಜಾಗ್ರತೆ ದೃಷ್ಟಿಯಿಂದ ದೇವಾಲಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಸ್ಥಳಕ್ಕೆ ಶಾಸಕ ಬಿ.ಬಿ. ನಿಂಗಯ್ಯ ಭೇಟಿ ನೀಡಿದ್ದರು. ಕಿಡಿಗೇಡಿಗಳ ಶೀಘ್ರ ಬಂಧನಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಪ್ರತಿಭಟನೆ: ದೇವಾಲಯದ ಮುಖಮಂಟಪವನ್ನು ಅನ್ಯಕೋಮಿನ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಹೆಸಗಲ್ ಗ್ರಾಮ ಪಂಚಾಯಿತಿಯ ಸುಭಾಷ್ನಗರ ನಿವಾಸಿಗಳು ರಸ್ತೆ ತಡೆ ನಡೆಸಿದರು.
ಸುಭಾಷ್ ನಗರದ ಏಳುಮುಖ ಚೌಡೇಶ್ವರಿ ದೇವಾಲಯದ ಮುಖದ್ವಾರವನ್ನು ನಾಲ್ಕೈದು ದಿನಗಳಿಂದ ಕಾಮಗಾರಿ ನಡೆಸಿ, ನಿರ್ಮಿಸಲಾಗಿತ್ತು. ಗ್ರಾಮದ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಬಳಗುಳ, ಬಾಬಾ ಮತ್ತು ಹಮೀದ್ ಎಂಬವರು ಜ.3ರಂದು ಬೆಳಗಿನ ಜಾವ ಇಟ್ಟಿಗೆಗಳಿಂದ ನಿರ್ಮಿಸಿದ್ದ ಮುಖ್ಯದ್ವಾರವನ್ನು ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಸ್ತೆ ತಡೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಕಂದಾಯ ಉಪವಿಭಾಗಾಧಿಕಾರಿ ಚೆನ್ನಬಸಪ್ಪ ಮನವಿ ಆಲಿಸಿದರು. ಮೂವರನ್ನು ಬಂಧಿಸುವ ಭರವಸೆಯನ್ನು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

