ಚಿಕ್ಕಮಗಳೂರು

ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

Published On :

ಚಿಕ್ಕಮಗಳೂರು: ಕೊಲೆ ಮಾಡಿದ ಆರೋಪಿಗೆ ಎರಡನೇ ಹೆಚ್ಚುವರಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
   2012 ರ ನವೆಂಬರ್ 23 ರಂದು ಮೈಲಿಮನೆ ಗ್ರಾಮದ ಬೂತನಗುಡ್ಡೆಯ ಸ್ವೀಟನ್ ಎಂಬ ಆರೋಪಿ ಕ್ಷುಲ್ಲಕ ಕಾರಣಕ್ಕೆ ತನ್ನ ಸಂಬಂಧಿ ಸುನೀಲನನ್ನು ಉಸಿರುಗಟ್ಟಿಸಿ ಸಾಯಿಸಿ, ಆತನ ಮೃತ ದೇಹವನ್ನು ಮನೆಯ ಹಿಂಭಾಗದಲ್ಲಿರುವ ಮಹೇಶ್ ಎಂಬುವವರಿಗೆ ಸೇರಿದ ತೋಟದ ಬಳಿ ನೀರು ಇಂಗುವುದಕ್ಕೆ ಗುಂಡಿಗಳನ್ನು ತೋಡಿದ್ದ ತೊಟ್ಟಿಲು ಗುಂಡಿಗೆ ಹಾಕಿ ಮಣ್ಣು ಮುಚ್ಚಿದ್ದ.
   ಈ ಸಂಬಂಧ ಮಲ್ಲಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶೆ ಎಂ. ಕೋಮಲತಾ ಅವರು, ಪ್ರಕರಣ ಸಾಬೀತಾಗಿದ್ದರಿಂದ ಆರೋಪಿ ಸ್ವೀಟನ್‌ಗೆ ಜೀವಾವಧಿ ಶಿಕ್ಷೆ ತೀರ್ಪು ನೀಡಿದ್ದಾರೆ.
 ಮತ್ತು 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಕೆ.ಕೆ. ಕುಲಕರ್ಣಿ ಅವರು ಪ್ರಕರಣ ನಡೆಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.