ಬೇಡಿಗೆ ಈಡೇರಿಕೆಗೆ ಆಗ್ರಹಿಸಿ ಮನವಿ
ಚಿಕ್ಕಮಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ, ಬಿಸಿಯೂಟ ಕಾರ್ಯಕರ್ತೆಯರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಪಿ.ಹೊನಕೇರಿ ಅವರಿಗೆ ಮನವಿ ಸಲ್ಲಿಸಿದರು.
ವಿಫಲ: ಬಿಸಿಯೂಟ ಕಾರ್ಯಕರ್ತೆಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ಪರಿಹಾರಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ, ಜಿಲ್ಲೆಯ ಹಲವಾರು ತಾಲೂಕುಗಳಲ್ಲಿ ಸರ್ಕಾರದ ಸುತ್ತೋಲೆಗಳನ್ನು ಯಥಾವತ್ತಾಗಿ ಜಾರಿ ಮಾಡುವಲ್ಲಿ ಇಲಾಖೆಗಳು ವಿಫಲವಾಗಿವೆ ಎಂದು ಮನವಿಯಲ್ಲಿ ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಹಾಲಿನ ವಿತರಣೆಗಾಗಿ ಸರ್ಕಾರ ಪ್ರತಿ ಶಾಲೆಗೆ ತಿಂಗಳಿಗೆ 100 ನೀಡುತ್ತಿದೆ. ಕಡೂರು, ತರೀಕೆರೆ ತಾಲೂಕಿನ ಹಲವಾರು ಶಾಲೆಗಳಿಗೆ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಹಲವಾರು ಶಾಲೆಗಳಲ್ಲಿ ಅಕ್ಷರ ದಾಸೋಹ, ಬಿಸಿಯೂಟ ಕಾರ್ಯಕರ್ತರಿಗೆ 3-4 ತಿಂಗಳಿಂದ ವೇತನ ನೀಡಿಲ್ಲ ಎಂದು ಹೇಳಿದ್ದಾರೆ.
ಸಕಾಲಕ್ಕೆ ಸಿಲಿಂಡರ್ ಕಲ್ಪಿಸಿ: ಗ್ಯಾಸ್ ವಿತರಕರು ನಿಯಮದ ಪ್ರಕಾರ ಶಾಲೆಯ ಬಾಗಿಲಿಗೆ ಗ್ಯಾಸ್ ಸಿಲಿಂಡರ್ ಪೂರೈಸಬೇಕು. ಆದರೆ, ಕೆಲವು ಕಂಪನಿಗಳ ಗ್ಯಾಸ್ ಸಿಲಿಂಡರ್ ವಿತರಕರು ದಾರಿಯ ಮಧ್ಯದಲ್ಲೇ ಗ್ಯಾಸ್ ಸಿಲಿಂಡರ್ ಇಳಿಸಿ, ಕಾರ್ಯಕರ್ತೆಯರಿಗೆ ತೆಗೆದುಕೊಂಡು ಹೋಗುವಂತೆ ಹೇಳುತ್ತಿದ್ದಾರೆ. ಹಲವಾರು ಶಾಲೆಗಳಲ್ಲಿ ಗ್ಯಾಸ್ ಸ್ಟೌ ಹಾಗೂ ಪೈಪ್‌ಗಳು ಕೆಟ್ಟು ಹೋಗಿದ್ದು, ಇವುಗಳ ಬದಲಾವಣೆಗೆ ಕ್ರಮ ವಹಿಸಿಲ್ಲ. ಗೋಧಿಯನ್ನು ಯಶಸ್ವಿಯಾಗಿ ನಿರ್ವಹಿಸಲು ಸೂಕ್ತ ಸಲಕರಣೆಗಳನ್ನು ನೀಡಬೇಕು. ಶಾಲೆಗಳಿಗೆ ಸಕಾಲದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ತಕ್ಕ ಪಾಠ ಕಲಿಸಿ: ಇದೇ ಸಂದರ್ಭ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಜಿ.ರಘು, ಬಿಸಿಯೂಟ ಕಾರ್ಯಕರ್ತೆಯರಿಗೆ ಅತ್ಯಂತ ಕನಿಷ್ಠ ವೇತನ ನೀಡಲಾಗುತ್ತಿದೆ. ಇದು, ಕೂಡ ಸಕಾಲದಲ್ಲಿ ಬಿಡುಗಡೆ ಮಾಡದೆ ಸರ್ಕಾರ ಶೋಷಣೆ ಮಾಡುತ್ತಿದೆ. ನಮ್ಮಗಳ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
ಸಂಘಟನೆ ಜಿಲ್ಲಾ ಕಾರ್ಯದರ್ಶಿ ಎಸ್.ವಿಜಯಕುಮಾರ್, ಜಾರ್ಜ್ ಆಸ್ಟಿನ್, ಇಂದುಮತಿ, ಚಂದ್ರಕಲಾ ಹಾಗೂ ಅಕ್ಷರ ದಾಸೋಹ, ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ, ಬಿಸಿಯೂಟ ಕಾರ್ಯಕರ್ತೆಯರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

