ಮೂಡಿಗೆರೆ ಸಹಜ ಸ್ಥಿತಿಗೆ
ಮೂಡಿಗೆರೆ: ನಿರ್ಮಾಣ ಹಂತದಲ್ಲಿದ್ದ ದೇವಸ್ಥಾನದ ಕಮಾನನ್ನು ಧ್ವಂಸಗೊಳಿಸಿದ ಕಿಡಿಗೇಡಿ ಕೃತ್ಯದ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಮೂಡಿಗೆರೆ ಪಟ್ಟಣದಲ್ಲಿ ಶನಿವಾರ ಜನ ಜೀವನ ಸಹಜ ಸ್ಥಿತಿಗೆ ಮರಳಿತು. ಘಟನೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದಲ್ಲದೆ, ಪ್ರತಿಭಟನೆ, ಬಂದ್, ರಸ್ತೆ ತಡೆ ಮೂಲಕ ಜನರು ಆಕ್ರೋಷ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುಂಜಾಗೃತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿತ್ತು.
ಇಂದು ಬೆಳಗಿನಿಂದಲೂ ನಿನ್ನೆಯ ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ಹಲವು ಶಂಕೆ ವ್ಯಕ್ತವಾಯಿತು. ಘಟನೆಗೆ ಕಾರಣರೆಂದು ದೂರಲಾಗುತ್ತಿರುವ ಅಲ್ತಾಫ್ ಇಂದೂ ಸಹ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಮೇಲಿನ ಆರೋಪಗಳು ಇನ್ನಷ್ಟು ದಣಢಪಡುವಂತಾಗಿದೆ ಎಂದು ಜನರು ಮಾತನಾಡಿಕೊಂಡರು.
ಪೊಲೀಸರು ಇಂತಹ ವ್ಯಕ್ತಿಯನ್ನು ಕೂಡಲೇ ಬಂಧಿಸುವ ಮೂಲಕ ಪಟ್ಟಣದಲ್ಲಿ ಶಾಂತಿ ಸೌಹಾರ್ಧತೆ ಕಾಪಾಡಲು ಅನುವು ಮಾಡಿಕೊಡಬೇಕು ಎಂಬ ಒತ್ತಾಯಗಳು ಸಹ ಕೇಳಿಬಂತು. ಈ ನಡುವೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಿ.ಎಲ್.ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ.ಮನು, ಸುಬ್ರಹ್ಮಣ್ಯ, ಲತೀಫ್, ಮದನ್, ಎ.ಜೆ.ಸುಬ್ರಾಯ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಚರ್ಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

