ಆಯ್ಕೆ ಪಟ್ಟಿ ಪ್ರಕಟ
ಚಿಕ್ಕಮಗಳೂರು: ಪ್ರಸಕ್ತ ಸಾಲಿನ ಬಿ.ಇಡಿ. ಕೋರ್ಸ್ಗೆ ಅರ್ಜಿ ಸಲ್ಲಿಸಿದ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಡಯಟ್ ಸಂಸ್ಥೆಯಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾದ ಅಭ್ಯರ್ತಿಗಳು ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿಯ ಮೂಲ ಅಂಕ ಪಟ್ಟಿಯ ಜೆರಾಕ್ಸ್ ಒಂದು ಸೆಟ್ ಮತ್ತು ವ್ಯಾಸಂಗ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರಗಳ ಮೂಲ ಮತ್ತು ಜೆರಾಕ್ಸ್ನೊಂದಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ರಾಮನಹಳ್ಳಿ, ಚಿಕ್ಕಮಗಳೂರು ಇಲ್ಲಿ ಪರಿಶೀಲನೆಗೆ ಜ.10 ರೊಳಗೆ ಒದಗಿಸಲು ತಿಳಿಸಿದೆ. ದಾಖಲಾತಿಗಳು ಪರಿಶೀಲನೆಗೊಂಡು ಸಿಂಧುವಾದಲ್ಲಿ ಅಭ್ಯರ್ಥಿಗಳು ಅಂದೇ ದಾಖಲಾಗಬಹುದು. ಹೆಚ್ಚಿನ ಮಾಹಿತಿಗಾಗಿ ಡಯಟ್ ಸಂಸ್ಥೆಯ ಸೂಚನಾ ಫಲಕ ಅಥವಾ ಪ್ರಾಂಶುಪಾಲರು ಡಯಟ್ ಹಾಗೂ ಉಪ ನಿರ್ದೇಶಕರು (ಅಭಿವೃದ್ಧಿ), ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
16ಕ್ಕೆ ಕೆಡಿಪಿ ಸಭೆ
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 20 ಅಂಶಗಳನ್ನು ಒಳಗೊಂಡಂತೆ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜ.16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಶಿಕ್ಷಣದ ಜೊತೆ ವೈಜ್ಞಾನಿಕ ಕೃಷಿಗೆ ಆದ್ಯತೆ ನೀಡಿ
ಶೃಂಗೇರಿ: ಇತ್ತಿಚ್ಚಿನ ದಿನಗಳಲ್ಲಿ ಕೃಷಿ ವಸ್ತುಗಳ ಬೆಲೆಯೇರಿಕೆ, ರೋಗಬಾಧೆಗಳಿಂದ ರೈತರು ಕೃಷಿ ಸಂಸ್ಕ್ಸೃತಿಗಳಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಕ್ಷೇತ್ರ ಕುಂಠಿತಗೊಳ್ಳುತ್ತಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಜ್ಞಾನಿಕ ಕೃಷಿ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎಸ್. ನಯನ ತಿಳಿಸಿದರು. ಟಿತಾಲೂಕಿನ ಮರ್ಕಲ್ ಪಂಚಾಯಿತಿ ಕಿಗ್ಗಾ ಶ್ರೀಅಭಿನವ ರಮಾನಂದ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘ ಹಾಗೂ ಕೃಷಿಕ ಸಂಘದ ಸಮಾರೋಪದಲ್ಲಿ ಅವರು ಮಾತನಾಡಿದರು. ಯುವಕರು ಹಳ್ಳಿಗಳಿಂದ ಪಟ್ಟಣಕ್ಕೆ ವಲಸೆ ಬರುತ್ತಿರುವುದರಿಂದ ಹಳ್ಳಿಗಳಲ್ಲಿ ಕೃಷಿ ಚಟುವಟಿಕೆಗಳ ಹಿನ್ನೆಡೆಯಾಗುತ್ತಿದೆ. ಕೃಷಿ ಕ್ಷೇತ್ರ ಕಡೆಗಣನೆ ಆಗುತ್ತಿದೆ. ಯುವಜನತೆ ಕೃಷಿ ಕ್ಷೇತ್ರದತ್ತ ಆಸಕ್ತಿ ವಹಿಸಬೇಕು ಎಂದರು. ಇದೇ ಸಂದರ್ಭ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.ಮುಖ್ಯ ಅತಿಥಿಗಳಾಗಿ ಕೇಶವಮೂರ್ತಿ, ಜೆಸಿಬಿಎಂ ಕಾಲೇಜು ಉಪನ್ಯಾಸಕ ಸುಬ್ರಮಣ್ಯ, ಜಿಪಂ ಮಾಜಿ ಉಪಾಧ್ಯಕ್ಷ ಮಾವಿನಕಾಡು ರಂಗನಾಥ್, ತಾಪಂ ಮಾಜಿ ಉಪಾಧ್ಯಕ್ಷ ನೂತನಕುಮಾರ್, ನವೀನ್ಕುಮಾರ್ ಇತರರಎ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

