ಚಿಕ್ಕಮಗಳೂರು

ಅಕ್ರಮ ಮರಳು ದಂಧೆ ನಿಯಂತ್ರಣಕ್ಕೆ ಒತ್ತಾಯ

Published On :

ಮೂಡಿಗೆರೆ: ತಾಲೂಕಿನ ಪ್ರಮುಖ ನದಿ ಹೇಮಾವತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಮರಳು ಲೂಟಿಕೋರರೊಂದಿಗೆ ಶಾಮಿಲಾಗಿದ್ದು, ಲೂಟಿಕೋರರ ಮೇಲೆ ಕ್ರಮ ಜರುಗಿಸುವಂತೆ ರಾಜ್ಯ ರೈತ ಸಂಘದ ಜಿಲ್ಲಾ ಆಧ್ಯಕ್ಷ ಡಿ.ಆರ್. ದುಗ್ಗಪ್ಪಗೌಡ ಒತ್ತಾಯಿಸಿದ್ದಾರೆ.
ಕರ್ನಾಟಕ ಗಣಿ ಮತ್ತು ಖನಿಜ ವಿನಾಯಿತಿ ಆದೇಶ 1994 ರ ಉಪಬಂಧಗಳು ಮತ್ತು ನಿಯಮಗಳು, ಸವೋಚ್ಚ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯದ ಹಸಿರು ಪೀಠಗಳ ಆದೇಶ ಉಲ್ಲಂಘನೆಯಾಗುತ್ತಿದೆ ಎಂದು ಹಲವು ಬಾರಿ ಪ್ರತಿಭಟನೆ ಮತ್ತು ಮನವಿ ಅರ್ಪಿಸಿದರೂ  ಅಧಿಕಾರಿಗಳು ಕ್ರಮ ಜರುಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಪಟ್ಣಣದಲ್ಲಿ ಮಟ್ಕಾದಂಧೆ, ಜೂಜು ಕ್ಲಬ್‌ಗಳು ಅಕ್ರಮವಾಗಿ ನಡೆಯುತ್ತಿದ್ದು. ಸಾರ್ವಜನಿಕರಲ್ಲಿ ಆಶಾಂತಿ ಉಂಟಾಗುವುದರೊಂದಿಗೆ  ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯಾಧಿಕಾರಿಗಳು ಈ ಅಕ್ರಮಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ಬಿ.ಸಿ. ದಯಾಕರ್, ತಾಲೂಕು ಅಧ್ಯಕ್ಷ ಪಟ್ಟದೂರ್ ನಾಗೇಶ್, ಪ್ರಧಾನ ಕಾರ್ಯದರ್ಶಿ ನಾಗರಾಜ್ ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.