ಕೆಲ ವ್ಯತ್ಯಾಸಗಳಿಂದ ಕಳೆದ ಬಾರಿ ಸೋಲು: ಶಿವಣ್ಣ
ಚಾಮರಾಜನಗರ: ಪಕ್ಷದಲ್ಲಿ ಉಂಟಾದ ವ್ಯತ್ಯಾಸಗಳಿಂದ ಕಳೆದ ಬಾರಿ ಸೋಲು ಅನುಭವಿಸಿದೆ ಎಂದು ಕೋಟೆ ಎಂ. ಶಿವಣ್ಣ ತಿಳಿಸಿದರು.
ನಗರದ ಗುರುನಂಜಶೆಟ್ಟರ ಛತ್ರದಲ್ಲಿ ಏರ್ಪಡಿಸಲಾಗಿದ್ದ ಜಾತ್ಯತೀತ ಜನತಾದಳದ ಕಾರ್ಯಕರ್ತರ ಸಭೆಯಲ್ಲಿ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು, ಕಳೆದ ಬಾರಿಯ ವ್ಯತ್ಯಾಸಗಳನ್ನು ಈ ಬಾರಿ ಸರಿಪಡಿಸಿಕೊಂಡು, ಲೋಕಸಭಾ ಚುನಾವಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿ ಕಣಕ್ಕಿಳಿಯುವ ಮೂಲಕ ಪಕ್ಷವನ್ನು ಗೆಲುವಿನ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದರು.
ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳವನ್ನು ತಳಮಟ್ಟದಿಂದ ಸಂಘಟಿಸುವ ಮೂಲಕ ಪಕ್ಷವನ್ನು ಬಲವರ್ಧನೆ ಗೊಳಿಸಬೇಕು. ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಜಿಲ್ಲೆಯಾದ್ಯಂತ ಶಿಸ್ತಿನ ಸಿಪಾಯಿಗಳಂತೆ ಪಕ್ಷ ಸಂಘಟಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸುವಂತೆ ಶ್ರಮವಹಿಸಿ ದುಡಿಯಬೇಕು ಎಂದು ಹೇಳಿದರು.
ದೇವೇಗೌಡರು, ಕುಮಾರಸ್ವಾಮಿ ಸೂಚನೆ ಮೇರೆಗೆ ಜಿಲ್ಲೆಯ ಪದಾಧಿಕಾರಿಗಳನ್ನು ನೇಮಿಸಿ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಾಗಿದೆ. ಪ್ರತಿ ತಾಲೂಕುಗಳಲ್ಲಿ ಅವರದ್ದೇ ಆದ ಗುರುತರ ಜವಾಬ್ದಾರಿಯನ್ನು ಹೊರಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಪಕ್ಷ ಸಂಘಟಿಸಲು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಮಾತನಾಡಿ, ಜೆಡಿಎಸ್ ಉತ್ತಮ ಹಿನ್ನೆಲೆವುಳ್ಳ ವ್ಯಕ್ತಿಗಳನ್ನು ಪದಾಧಿಕಾರಿಗಳನ್ನಾಗಿ ನೇಮಕ ಮಾಡಿದ್ದು, ಅವರು ಸಾರ್ವಜನಿಕರಿಗೆ ಸೇವೆ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡಲು ಮುಂದಾಗಬೇಕು ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್‌ಬಾಬು, ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್, ರಾಜ್ಯ ಉಪಾಧ್ಯಕ್ಷ ಬಿ.ಪಿ.ಮುದ್ದುಮಲ್ಲು, ವಿಕಲಚೇತನ ವಿಭಾಗದ ರಾಜ್ಯಾಧ್ಯಕ್ಷ ಬಸವಣ್ಣ, ಲೋಕಸಭಾ ಕ್ಷೇತ್ರದ ಉಸ್ತುವಾರಿ ಬಸವರಾಜು, ಜಿಲ್ಲಾಧ್ಯಕ್ಷ ಶಿವಮೂರ್ತಿ, ಮಹಾಪ್ರಧಾನ ಕಾರ್ಯದರ್ಶಿ ಸಿ.ಎಂ.ಕೃಷ್ಣಮೂರ್ತಿ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಆರ್.ಮಹದೇವಯ್ಯ, ಪಿ.ಎನ್.ಕೃಷ್ಣಯ್ಯ, ಎಸ್ಟಿ ಘಟಕದ ಅಧ್ಯಕ್ಷ ಎಂ.ನಾಗೇಶ್, ಅಲ್ಪ ಸಂಖ್ಯಾತ ಘಟಕದ ಇಮ್ತಿಯಾಜ್, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಶಿವರಾಜ್, ನವೀವುಲ್ಲಾ, ಮಹೇಶ್‌ಗೌಡ, ಗುರುಮೂರ್ತಿ , ಮೂಡ್ನಾಕೂಡು ಕುಮಾರ್, ಜಿಲ್ಲಾ ಜೆಡಿಎಸ್ವ್‌ಕ್ತಾರ ಸಿ.ಎಸ್.ಕುಮಾರಸ್ವಾಮಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

