ಚೈತನ್ಯ ಕ್ರಿಕೆಟರ್ಸ್ ತಂಡಕ್ಕೆ ಪ್ರಥಮ ಸ್ಥಾನ
ನರಸಿಂಹರಾಜಪುರ: ಚೈತನ್ಯ ಯುವಕ ಸಂಘದ ದಶಮಾನೋತ್ಸವ ಅಂಗವಾಗಿ ಚೈತನ್ಯ ಕ್ರಿಕೆಟರ್ಸ್ ಆಶ್ರಯದಲ್ಲಿ ಕಳೆದ 3 ದಿನಗಳಿಂದ ನಡೆಯುತ್ತಿದ್ದ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನ.ರಾ.ಪುರದ ಚೈತನ್ಯ ಕ್ರಿಕೆಟರ್ಸ್ ತಂಡವು ಪ್ರಥಮ ಸ್ಥಾನ ಪಡೆದು 25,555 ನಗದು ಹಾಗೂ ಪಾರಿತೋಷಕ ಪಡೆಯಿತು. ಶಿವಮೊಗ್ಗ ಇಲೆವನ್ ಕ್ರಿಕೆಟ್ ತಂಡ ದ್ವಿತೀಯ ಸ್ಥಾನ ಪಡೆದು 15,555 ನಗದು ಹಾಗೂ ಪಾರಿತೋಷಕ ಪಡೆಯಿತು.
ಸರಣಿ ಸರ್ವೋತ್ತಮ ಪ್ರಶಸ್ತಿಯು ಚೈತನ್ಯ ಕ್ರಿಕೆಟರ್ಸ್ ಆಟಗಾರ ಚೈತನ್ ಪಡೆದರು. ಸೋಮವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಟಿ.ರಾಜೇಂದ್ರ ಗೆದ್ದ ತಂಡಗಳಿಗೆ ಪಾರಿತೋಷಕ ವಿತರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಚೈತನ್ಯ ಯುವಕ ಸಂಘದ ಅಧ್ಯಕ್ಷ ಪ್ರಶಾಂತ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರಾದ ಲಕ್ಷ್ಮಣ ಶೆಟ್ಟಿ, ಎಚ್.ಕೆ.ಸುನೀಲ್ ಕುಮಾರ್, ಅಬ್ದುಲ್ ಸುಬಾನ್, ಪಿ.ಆರ್.ಸುಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ.ಅಬೂಬಕರ್, ಚೈತನ್ಯ ಕ್ರಿಕೆಟರ್ಸ್‌ನ ಉಪ ನಾಯಕ ಎಂ.ನಟೇಶ್ ಮತ್ತಿತರರು ಉಪಸ್ಥಿತರಿದ್ದರು.
ಸನ್ಮಾನ: ಇದೇ ಸಂದರ್ಭದಲ್ಲಿ ಹಿರಿಯ ಕ್ರಿಕೆಟ್ ಆಟಗಾರ ಹರ್ಷೇಂದ್ರ ಜೈನ್ ಸೇರಿದಂತೆ 40 ಕ್ಕೂ ಹೆಚ್ಚು ಕ್ರಿಕೆಟ್ ಆಟಗಾರರನ್ನು ಸನ್ಮಾನಿಸಲಾಯಿತು. ರಾಜ್ಯ ವಿವಿಧ ಜಿಲ್ಲೆಗಳ 35 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

