ಚಿಕ್ಕಮಗಳೂರು

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ: ರಾಮದಾಸ್ ಪ್ರಭು

Published On :

ಚಿಕ್ಕಮಗಳೂರು: ಭಾರತದಲ್ಲಿ ಕ್ರಿಕೆಟ್‌ಗೆ ಹೆಚ್ಚಿನ ಒಲವು ತೋರುತ್ತಿದ್ದರೂ ಶಾಲಾ ಹಂತದಲ್ಲಿ ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿಲ್ಲ ಎಂದು ಮಾಜಿ ಕ್ರಿಕೆಟಿಗ ಮತ್ತು ಕೋಚ್ ರಾಮದಾಸ್ ಪ್ರಭು ವಿಷಾದ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ರೋಟರಿ ಸಂಸ್ಥೆ ಆಯೋಜಿಸಿದ್ದ ಯುವ ಚೇತನ-2014 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿ ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.
ಪ್ರೋತ್ಸಾಹ:  ಮಕ್ಕಳಲ್ಲಿ ಆಟೋಟ ಚಟುವಟಿಕೆಗಳು ನಶಿಸುತ್ತಿರುವ ಸಮಯದಲ್ಲಿ ರೋಟರಿ ಸಂಸ್ಥೆ ಕ್ರಿಕೆಟ್ ಪಂದ್ಯ ನಡೆಸುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಲೆದರ್ ಬಾಲ್‌ನಲ್ಲಿ ಕ್ರಿಕೆಟ್ ಆಡಿಸಬೇಕು.
ಕರ್ನಾಟಕ ಕ್ರಿಕೆಟ್‌ನ 18 ವರ್ಷದೊಳಗಿನವರ ತಂಡದಲ್ಲಿ ಬೇರೆ ಜಿಲ್ಲೆಗಳಿಂದ ಮಕ್ಕಳು ಆಯ್ಕೆಯಾಗುತ್ತಿದ್ದಾರೆ. ಆದರೆ, ಚಿಕ್ಕಮಗಳೂರು ಜಿಲ್ಲೆಯವರು ಆಯ್ಕೆಯಾಗುತ್ತಿರುವುದು ವಿರಳವಾಗಿದ್ದಾರೆ. ಹಾಗಾಗಿ ಮಕ್ಕಳು ತಮ್ಮ ಕ್ರಿಕೆಟ್ ಬೆಳವಣಿಗೆಗೆ ಇಂತಹ ವೇದಿಕೆಗಳನ್ನು ಬಳಸಿಕೊಳ್ಳಬೇಕು. ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದವರನ್ನು ರಾಜ್ಯ ತಂಡಕ್ಕೆ ಆಯ್ಕೆಯಾಗಲು ಪ್ರೋತ್ಸಾಹಿಸಲಾಗುವುದು ಎಂದರು.
ಯುವ ಚೇತನ ಸಮಿತಿ ಅಧ್ಯಕ್ಷ ರಘುನಂದನ್ ಮಾತನಾಡಿ, ಕ್ರೀಡೆ, ಸಂಸ್ಕೃತಿ, ಕಲೆ, ಭಾಷೆ ಮತ್ತಿತರೆ ಚಟುವಟಿಕೆಗಳಿಗೆ ಒತ್ತು ನೀಡಲು ರೋಟರಿ ಹಲವಾರು ವರ್ಷಗಳಿಂದ ಮಕ್ಕಳಿಗೆ ಯುವ ಚೇತನ ವೇದಿಕೆ ಸೃಷ್ಟಿಸಿದ್ದು, ಮಕ್ಕಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು.
ಕ್ರಿಕೆಟಿಗ ನಾರಾಯಣಸ್ವಾಮಿ ಉಪಸ್ಥಿತರಿದ್ದರು. ರಘುನಂದನ್ ಸ್ವಾಗತಿಸಿ, ಕಾರ್ಯದರ್ಶಿ ಸುಧೀರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.