'ಬೋರ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ'
ಕ.ಪ್ರ.ವಾರ್ತೆ, ತರೀಕೆರೆ, ಜ.7
ಕುಡಿಯುವ ನೀರಿನ ಸಮಸ್ಯೆ ವಿಚಾರದಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ತಾ.ಪಂ. ಅಧ್ಯಕ್ಷೆ ಶಕುಂತಲ ನಾಗರಾಜ್ ತಿಳಿಸಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ವಿಜಾರದಲ್ಲಿ ಜಿ.ಪಂ. ಎಂಜಿನಿಯರಿಂಗ್ ಉಪ ವಿಭಾಗದ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಎಂಜಿನಿಯರಿಂಗ್ ಇಲಾಖೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗಾಗಿ ಕೊರೆಸಿದ ಬೋರ್‌ವೆಲ್‌ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರು ಒದಗಿಸಬೇಕು. ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಕಾಮಗಾರಿಗೆ ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿ ಕುಡಿಯುವ ನೀರನ ಸಮಸ್ಯೆ ನಿವಾರಣೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ತಿಳಿಸಿದರು.
ಪಂಚಾಯತ್‌ರಾಜ್ ಇಲಾಖೆಯಲ್ಲಿ ಅನುಮೋದಿತ ಕ್ರಿಯಾಯೋಜನೆಗಳಿಗೆ ಅಂದಾಜು ಪಟ್ಟಿ ತಯಾರಿಸಬೇಕು. ಕಾಮಗಾರಿಗಳನ್ನು ತುರ್ತಾಗಿ ಅನುಷ್ಠಾನಗೊಳಿಸಬೇಕು. ಲೋಕಸಭಾ ಚುನಾವಣೆ ಘೋಷಣೆಯಾಗುವ ಮುನ್ನವೇ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಶ್ರಮ ವಹಿಸಬೇಕು ಎಂದರು.
ತಾಪಂ ಉಪಾಧ್ಯಕ್ಷೆ ಗೌರಮ್ಮ ನಾಗರಾಜ್, ಜಿಪಂ ಸದಸ್ಯ ಕೆ.ಪಿ.ಕುಮಾರ್, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್, ಕಾರ್ಯನಿರ್ವಹಣಾಧಿಕಾರಿ ದೇವರಾಜಪ್ಪ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

