ಅಡಕೆ ಬೆಳೆಗಾರರ ಹೋರಾಟ ಹತ್ತಿಕ್ಕುವ ಯತ್ನ: ಆರೋಪ
ಕ.ಪ್ರ. ವಾರ್ತೆ, ಕೊಪ್ಪ, ಜ.8
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಂಗ್ರೆಸ್ ನಾಯಕರು ಅಡುವ ಮಾತಿಗೂ, ಮಾಡುವ ಕೆಲಸಕ್ಕೂ, ತಾಳೆ ಇಲ್ಲದಂತೆ ಅಗಿ ಜನಸಾಮಾನ್ಯರು ಹಾಗೂ ರೈತರು ಗೊಂದಲಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎನ್. ರಾಮಸ್ವಾಮಿ ಟೀಕಿಸಿದರು.
ಬುಧವಾರ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿರುವ ಹೆಚ್ಚುವರಿ ಸಾಲಿಸೀಟರ್ ಜನರಲ್ ಇಂದಿರಾ ಜೈಸಿಂಗ್ ಅವರು ಕಾರವಾರದಲ್ಲಿ ಅಡಕೆ ಮನುಷ್ಯನ ಜೀವಕ್ಕೆ ಹಾನಿಕಾರಕವೆಂದು ಸುಪ್ರೀಂ ಕೋರ್ಟ್ಗೆ ಶಿಫಾರಸು ಮಾಡಿರುವುದು ಸತ್ಯ ಎಂದು ಇತ್ತಿಚೇಗೆ ಹೇಳಿಕೆ ನೀಡಿದ್ದಾರೆ. ಅದರೆ, ಚಿಕ್ಕಮಗಳೂರು ಮತ್ತು ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಜಯಪ್ರಕಾಶ್ ಹೆಗ್ಡೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡಕೆ ನಿಷೇಧ ಮಾಡುವುದಕ್ಕೆ ಕೇಂದ್ರ ಸರ್ಕಾರ ಶಿಫಾರಸು ಮಾಡಿಲ್ಲ. ವಿನಾಕಾರಣ ವಿರೋಧ ಪಕ್ಷದವರು ಹಬ್ಬಿಸಿರುವ ಸುಳ್ಳು ಸುದ್ದಿ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುವ ಮೂಲಕ ಅಡಕೆ ಬೆಳೆಗಾರರ ಪರ ಹೋರಾಟ ಮಾಡುವ ಚಳವಳಿಕಾರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ.
ಅಡಕೆ ಬೆಳೆಗಾರಿಗೆ ಅಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿಯತ್ತಿದ್ದ ರಾಜ್ಯ ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷ ಸಚಿನ್ ಮೀಗಾ ಅವರನ್ನು ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಲಾಗಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹೇಳಿಕೆ ನೀಡಿರುವುದು ಅಡಕೆ ಬೆಳೆಗಾರರನ್ನು ಇನ್ನಷ್ಟು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷೆ ಪದ್ಮಾವತಿ ರಮೇಶ್, ಸದಸ್ಯರಾದ ನಾರಾಯಣ್, ಜಯಂತ್, ಸುಜಾತ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಸಿ.ನರೇಂದ್ರ, ಬಿಜೆಪಿ ಮುಖಂಡರಾದ ಪುಣ್ಯಪಾಲ, ಶೃಂಗೇಶ್ ಇತರರು ಇದ್ದರು.
-
ರಸ್ತೆ ಅಭಿವೃದ್ಧಿಗೆ 7 ಕೋಟಿ ಅನುದಾನ
ನರಸಿಂಹರಾಜಪುರ: ತಾಲೂಕು ವ್ಯಾಪ್ತಿಯ ಕುದುರೆಗುಂಡಿ- ಹಳ್ಳಿಬೈಲು- ಮಲ್ಲಂದೂರು- ಮುತ್ತಿನಕೊಪ್ಪ ರಸ್ತೆಗೆ ಕೇಂದ್ರ ಸರ್ಕಾರದ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರು 7 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ತಾಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ. ಅಬೂಬಕರ್ ತಿಳಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆ ನೀಡಿ, ಈ ರಸ್ತೆಗೆ 7 ಕೋಟಿ ಮಂಜೂರಾಗಲು ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್, ಸಂಸದ ಜಯಪ್ರಕಾಶ ಹೆಗಡೆ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಶ್ರಮಿಸಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

