'ಮಹಿಳೆಯರ ಸರ್ಕಾರಿ ಯೋಜನೆ ಸದ್ಬಳಕೆಯಾಗಲಿ'
ಕ.ಪ್ರ. ವಾರ್ತೆ, ತರೀಕೆರೆ, ಜ.8
ವಿವಿಧ ಯೋಜನೆಗಳ ಪ್ರಯೋಜನ ಪಡೆದು ಮಹಿಳೆಯರು ಸಬಲರಾಗಬೇಕೆಂದು ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಎನ್. ವೀರಭದ್ರಪ್ಪ ತಿಳಿಸಿದ್ದಾರೆ.
ಸಮೀಪದ ಹಿರೇಕಾನವಂಗಲ ರುದ್ರೇಶ್ವರ ಪ್ರೌಢಶಾಲೆ ಆವರಣದಲ್ಲಿ ನೆಹರು ಯುವ ಕೇಂದ್ರ ಚಿಕ್ಕಮಗಳೂರು, ಕನ್ನಡ ಯುವಕ ಸಂಘ, ಜನಚಿಂತನ ಸಂಸ್ಥೆ, ವನಸಿರಿ ಇಕೋ ಕ್ಲಬ್ ವತಿಯಿಂದ ನಡೆದ ವಿಷಯಾಧಾರಿತ ಅರಿವು ಮೂಡಿಸುವ ಶಿಕ್ಷಣ ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ವಿಷಯ ಕುರಿತು ಮಾತನಾಡಿ, ನಿರುದ್ಯೋಗಿ ಯುವಕರು ಅವರಿಗೆ ಸರಿಹೊಂದುವ ಉದ್ಯೋಗ ಪ್ರಾರಂಭಿಸಲು ಪೂರಕ ತರಬೇತಿಗಳನ್ನು ಕಾಬ್‌ಸೆಟ್ ತರಬೇತಿ ಕೇಂದ್ರಗಳಲ್ಲಿ ಉಚಿತವಾಗಿ ಪಡೆದು ಉದ್ಯೋಗ ಪ್ರಾರಂಭಿಸಲು ಅವಕಾಶವಿದೆ. ಇದರ ಉಪಯೋಗ ಪಡೆಯಬಹುದು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಶಿವಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆ ಆಸಕ್ತಿ ತೋರಿಸಬೇಕು. ಪರಿಸರ ಸಮತೋಲನಕ್ಕೆ ತಮ್ಮ ಕೈಲಾದ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು. ಶಾಲೆ ಮುಖ್ಯೋಪಾಧ್ಯಾಯ ಬೋರ್ಗೇಶಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಯುವಜನರಿಗೆ ತಮ್ಮ ಜವಾಬ್ದಾರಿ ಹಾಗೂ ಕರ್ತವ್ಯ ನೆನಪಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿ. ತಮ್ಮನ್ನು ಸಮಗ್ರವಾಗಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣದಲ್ಲಿ ಭಾಗಿಯಾಗುವ ಎಲ್ಲ ಆಂಶಗಳು ಅಡಕವಾಗಿದ್ದು, ಅದನ್ನು ಅರ್ಥೈಸಿಕೊಂಡು ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ರಾಜಪ್ಪ, ಜೀಯಾವುಲ್ಲಾ ಮತ್ತಿತರರು ಮಾತನಾಡಿದರು. ವಿನಯ್, ಶೃತಿ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

