ಲೋಕ ಸಂಗ್ರಹ ಅಭಿಯಾನಕ್ಕೆ ಚಾಲನೆ
ತರೀಕೆರೆ: ದೇಶದ ಒಳಿತಿಗಾಗಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಪಂ ಸದಸ್ಯ ಕಲ್ಮರುಡಪ್ಪ ತಿಳಿಸಿದ್ದಾರೆ.
ಬಿಜೆಪಿ ತಾಲೂಕು ಘಟಕದ ವತಿಯಿಂದ ಬುಧವಾರ ಪಟ್ಟಣದ ಕಾಳಿಕಾಂಬ ದೇವಾಲಯದ ಆವರಣದಲ್ಲಿ ಏರ್ಪಾಡಾಗಿದ್ದ ಬಿಎಲ್ಎ- 2 ಹಾಗೂ ಲೋಹ ಸಂಗ್ರಹಣಾ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಲೋಕಸಭಾ ಚುನಾವಣೆಯು ವಿಶೇಷ ಮಹತ್ವ ಪಡೆದಿದೆ. ದೇಶವು ಗಂಡಾಂತರದಲ್ಲಿದೆ. ನಮ್ಮ ನೆಲ ಆಕ್ರಮಣವಾಗುತ್ತಿದೆ. ನುಸುಳಿಕೋರರು ದೇಶಕ್ಕೆ ಬರುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಮುದುಗುಂಡಿ ಲೋಹಿತ್ ಮಾತನಾಡಿ, ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರ ಬೃಹತ್ ಪ್ರತಿಮೆ ಸ್ಥಾಪಿಸುವ ಹಿನ್ನೆಲೆಯಲ್ಲಿ ಎಲ್ಲೆಡೆ ಲೋಹ ಸಂಗ್ರಹಣಾ ಅಭಿಯಾನ ಕಾರ್ಯಾಗಾರ ಮತ್ತು ಬಿಎಲ್ಎ- 2 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಮೋಹನ್ಕುಮಾರ್ ಕರಕುಚ್ಚಿ, ಪ್ರಧಾನ ಕಾರ್ಯದರ್ಶಿ ಟಿ.ಜಿ. ಸದಾನಂದ್, ಮಲೆನಾಡು ಅಭಿವೃದ್ಧಿ ಮಂಡಳಿ ನಿಕಟಪೂರ್ವ ಅಧ್ಯಕ್ಷ ಎನ್. ಮಂಜುನಾಥ್, ಮುಖಂಡರಾದ ಟಿ.ಎಂ. ಭೋಜರಾಜ್, ತಾಪಂ ಸದಸ್ಯ ಬಿ.ಆರ್. ರವಿ, ಅರವಿಂದ್, ಅವಿನಾಶ್, ಚೆನ್ನಬಸಪ್ಪ ಇತರರು ಭಾಗವಹಿಸಿದ್ದರು.
--
ಕಾರಿಗೆ ಬೆಂಕಿ: ಇನ್ನಿಬ್ಬರ ಬಂಧನ
ಶೃಂಗೇರಿ: ಪಟ್ಟಣದಲ್ಲಿ ಕಳೆದೆರೆಡು ದಿನಗಳ ಹಿಂದೆ ಕಾರೊಂದಕ್ಕೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಶಿವಮೊಗ್ಗದ ಸೂಳೆಬೈಲು ಮೂಲದ ರಫಿಕ್ ಹಾಗೂ ಸಾಧಿಕ್ ಎಂಬುವರನ್ನು ಬೇಗಾರು ಬಳಿ ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಕಳೆದೆರೆಡು ದಿನಗಳ ಹಿಂದೆ ವೆಲ್ಕಂ ಗೇಟ್ ಬಳಿ ಅಸ್ಗರ್ ಅಲಿ ಎಂಬುವವರ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಮಾರುತಿ 800 ಕಾರಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಕಾರಿನ ಮಾಲಿಕ ಅಸ್ಗರ್ ಅಲಿ ನೀಡಿದ ದೂರನ್ನು ದಾಖಲಿಸಿಕೊಂಡು ಪೋಲೀಸರು ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಟಿಂಕರ್ ಸೈಯದ್ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

