ಚಿಕ್ಕಮಗಳೂರು

ಈದ್ ಮಿಲಾದ್: ಬಂದೋಬಸ್ತ್‌ಗೆ ಬಿಜೆಪಿ ಆಗ್ರಹ

Published On :

ಚಿಕ್ಕಮಗಳೂರು: ಈದ್ ಮಿಲಾದ್ ಆಚರಣೆಯ  ಹಿನ್ನೆಲೆಯಲ್ಲಿ ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕೆಂದು ನಗರ ಬಿಜೆಪಿ ಆಗ್ರಹಿಸಿದೆ.
ದರ್ಗಾ ಅಪವಿತ್ರ ಘಟನೆಯ ಹಿನ್ನೆಲೆಯಲ್ಲಿ ನಗರದಲ್ಲಿ ಇತ್ತೀಚೆಗೆ ಅಶಾಂತಿ ಉಂಟಾಗಿತ್ತು. ಅದೇ ವಿಷಯ ಗಮನದಲ್ಲಿಟ್ಟುಕೊಂಡು ಮುಸ್ಲಿಂ ಸಮುದಾಯದ ಕೆಲವು ಯುವಕರು ಈದ್ ಮಿಲಾದ್ ದಿನದಂದು ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ನಗರ ಬಿಜೆಪಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಮೆರವಣಿಗೆಯ ವೇಳೆಯಲ್ಲಿ ಪೊಲೀಸರ ಮೇಲೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದರು. ಇದೀಗ ದರ್ಗಾ ಅಪವಿತ್ರಗೊಳಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಅಶಾಂತಿ ಉಂಟು ಮಾಡುವ ಸಾಧ್ಯತೆ ಇರುವುದರಿಂದ ನಗರಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ದರ್ಗಾ ಅಪವಿತ್ರತೆಯ ಹಿಂದೆ ಇರುವಂತಹ ಕಿಡಿಗೇಡಿಗಳು ಮತ್ತು ಗಲಭೆಯಲ್ಲಿ ಭಾಗವಹಿಸಿದ್ದ ಕೆಲವು ಮುಸ್ಲಿಂ ಯುವಕರನ್ನು ತಕ್ಷಣ ಬಂಧಿಸಿ ಈದ್ ಮಿಲಾದ್ ಆಚರಣೆ ಶಾಂತಿಯುತವಾಗಿ ನಡೆಸಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.