ಅಗತ್ಯ ವಸ್ತುಗಳ ಬೆಲೆ ಏರಿಕೆ: ಪ್ರತಿಭಟನೆ
ಶೃಂಗೇರಿ: ಕೇಂದ್ರ ಸರ್ಕಾರ ಪದೇ ಪದೇ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ವಾಹನಗಳ ಬಿಡಿಭಾಗಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪಟ್ಟಣದಲ್ಲಿ ಗುರುವಾರ ಆಟೋಚಾಲಕರು, ಮಾಲಿಕರು ಬೃಹತ್ ಪ್ರತಿಭಟನೆ ನಡೆಸಿದರು.
ಬುಧವಾರ ಮಧ್ಯರಾತ್ರಿಯಿಂದ ಆಟೋ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಲಾಯಿತು. ನಂತರ ಗುರುವಾರ ಬೆಳಿಗ್ಗೆ ಪಟ್ಟಣದ ನೂತನ ಬಸ್ಸು ನಿಲ್ದಾಣದಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆ ಹೊರಟಿತು. ಸಂತೆಮಾರುಕಟ್ಚೆ ಮುಂಬಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಕೃತಿ ದಹಿಸಲಾಯಿತು.
ಬಡವರಿಗೆ ಹೊರೆ: ನಂತರ ತಾಲೂಕು ಕಚೇರಿ ಎದುರು ನಡೆದ ಸಮಾವೇಶದಲ್ಲಿ ಮಾತನಾಡಿದ ತಾಲೂಕು ಆಟೋಚಾಲಕರ ಸಂಘದ ಅಧ್ಯಕ್ಷ ಶ್ರೀಕರ, ಕೇಂದ್ರ ಸರ್ಕಾರ ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕಿಗೆ ಕೊಡಲಿಯೇಟು ಹಾಕುತ್ತಿದೆ. ಸರ್ಕಾರ ಕೂಡಲೇ ಅಗತ್ಯ ವಸ್ತುಗಳ ಬಲೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹದಗೆಟ್ಟ ರಸ್ತೆಗಳನ್ನು ದುರಸ್ತಿಪಡಿಸಬೇಕು, ರಿಕ್ಷಾ ಚಾಲಕರ ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಬೇಕು. ಹೊಸ ಪರವಾನಿಗೆ ನೀಡಬೇಕು, ಶೃಂಗೇರಿ ಠಾಣೆಯಲ್ಲಿ ಸಿಬ್ಬಂದಿಗಳ ಕೊರತೆಯನ್ನು ತುಂಬಿಸಬೇಕು, ಟ್ರಾಫಿಕ್ ವ್ಯವಸ್ಥೆ ಸರಿಪಡಿಸಬೇಕು ಎಂದು ತಹಸಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ತಾಲೂಕು ಆಟೋಚಾಲಕರ ಸಂಘದ ಉಪಾಧ್ಯಕ್ಷ ಚಂದ್ರಶೇಖರ್, ರವೀಂದ್ರ, ಅಜೀಜ್, ತಾಲೂಕು ಪಂಚಾಯಿತಿ ಸದಸ್ಯೆ ಗೀತಾ ಶ್ರೀನೀವಾಸ ನಾಯಕ್, ಪಟ್ಟಣಪಂಚಾಯಿತಿ ಸದಸ್ಯೆ ಸುಮಾ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

