ಪ್ರತಿಭಾ ಪ್ರದರ್ಶನದಿಂದ ಆತ್ಮಸ್ಥೈರ್ಯ ವೃದ್ಧಿ
ಕ.ಪ್ರ.ವಾರ್ತೆ, ನರಸಿಂಹರಾಜಪುರ, ಜ. 9
ಕಲಿಕೋತ್ಸವ ಕಾರ್ಯಕ್ರಮವು ಸರ್ಕಾರದ ವಿನೂತನ ಕಾರ್ಯಕ್ರಮವಾಗಿದ್ದು ಶಾಲೆಯಲ್ಲಿ ಕಲಿತಿರುವ ವಿಷಯಗಳನ್ನು ವೇದಿಕೆಯಲ್ಲಿ ಮತ್ತೆ ಪ್ರದರ್ಶನ ಮಾಡುವುದರಿಂದ ಮಕ್ಕಳ ಆತ್ಮಸ್ಥೈರ್ಯವು ಹೆಚ್ಚಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಸುಜಾತ ತಿಳಿಸಿದರು.
ಗುರುವಾರ ಮೂಡಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಕಲಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತೀರ್ಪುಗಾರರು ಸರಿಯಾದ ತೀರ್ಪು ನೀಡುವುದರ ಮೂಲಕ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಎಂದರು.
ಮಕ್ಕಳಿಗೆ ವಿವಿಧ ಸ್ಪರ್ಧೆ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ವರ್ಷದಿಂದ 1ನೇ ತರಗತಿಯಿಂದ 8 ನೇ ತರಗತಿಯ ಮಕ್ಕಳಿಗೆ ಕಲಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಶಾಲಾ ಮಟ್ಟ, ಕ್ಲಸ್ಟರ್ ಹಾಗೂ ಜಿಲ್ಲಾ ಮಟ್ಟದವರೆಗೆ ಸ್ಪರ್ಧೆಗಳನ್ನು ನಡೆಸಲಾಗುವುದು. ಮಕ್ಕಳ ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳು ನಡೆಯಲಿದೆ. ಬರೆಯುವುದು, ಓದುವುದು, ಕಾಗುಣಿತ ತಪ್ಪುಗಳು ಈ ಸ್ಫರ್ಧೆಯಲ್ಲಿ ನಡೆಯಲಿದೆ ಎಂದರು.
ಅತಿಥಿಯಾಗಿದ್ದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಡಿ.ರಾಜಪ್ಪ ಮಾತನಾಡಿ, ಸರ್ಕಾರವು ಶಿಕ್ಷಣಕ್ಕೆ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ. ಕಲಿಕೋತ್ಸವ ಕಾರ್ಯಕ್ರಮವು ಮಕ್ಕಳ ಪ್ರತಿಭೆಗಳನ್ನು ಮತ್ತಷ್ಚು ಗಟ್ಟಿಗೊಳಿಸುತ್ತದೆ ಎಂದರು.
ಅಧ್ಯಕ್ಷತೆಯನ್ನು ತಾಲೂಕು ಪಂಚಾಯ್ತಿ ಅಧ್ಯಕ್ಷ ಜೆ.ಜಿ.ನಾಗರಾಜಜ್ವಹಿಸಿದ್ದರು.ಅತಿಥಿಗಳಾಗಿ ಬಾಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರೀನಾ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.
ಗುರುಶಾಂತಪ್ಪ, ಉಪಾಧ್ಯಕ್ಷ ಈಶ, ಬಿ.ಆರ್.ಸಿ.ಗಳಾದ ಎಸ್.ಕೆ.ಪ್ರಸನ್ನ, ಕೃಷ್ಣನಾಯಕ್, ಮೂಡಬಾಗಿಲು ಶಾಲೆಯ ಮುಖ್ಯೋಪಾಧ್ಯಾಯ ಈಶ್ವರಾಚಾರ್, ಕ್ಲಸ್ಟರ್ ಮಟ್ಟದ ಅಧಿಕಾರಿ ಉಪೇಂದ್ರ, ಈ.ಸಿ.ಓ ಗಳಾದ ವೆಂಕಟರಾಜ್, ಲೋಹಿತ್ ಮತ್ತಿತರರು ಉಪಸ್ಥಿತರಿದ್ದರು. ಪುಷ್ಪಾ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

