ಕೆಜೆಪಿ ಮುಖಂಡ ಬೆಳ್ಳಿ ಪ್ರಕಾಶ್ಗೆ ಬಿಜೆಪಿ ಆಹ್ವಾನ
ಕ.ಪ್ರ.ವಾರ್ತೆ, ಕಡೂರು, ಜ.10 ಬಿಜೆಪಿಯಲ್ಲಿ ಕೆಜೆಪಿ ವಿಲೀನವಾದ ಹಿನ್ನೆಲೆಯಲ್ಲಿ ಕಡೂರು ತಾಲೂಕು ಕೆಜೆಪಿ ಮುಖಂಡ ಬೆಳ್ಳಿ ಪ್ರಕಾಶ್ ಅವರನ್ನು ಬಿಜೆಪಿ ತಾಲೂಕು ಯುವ ಮೋರ್ಚಾ ಮತ್ತು ಜಿಲ್ಲಾ ಸ್ಲಂ ಯುವ ಮೋರ್ಚಾ ಪದಾಧಿಕಾರಿಗಳು ಹಾಗು ಕಾರ್ಯಕರ್ತರು ಬಿಜೆಪಿಗೆ ಬರುವಂತೆ ಆಹ್ವಾನಿಸಿದರು.
ಸ್ಲಂ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಗೋಪಿಕುಮಾರ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಂಕ್ ಮಂಜು, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಬಿ.ಎಂ. ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಪ್ರಕಾಶ್, ನೇತೃತ್ವದಲ್ಲಿ ಕಡೂರು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ, ಬೆಳ್ಳಿ ಪ್ರಕಾಶ್ ಅವರನ್ನು ಸ್ವಾಗತಿಸಲಾಯಿತು.
ಇನ್ನಷ್ಟು ಬಲ: ಇದೇ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಬೆಳ್ಳಿಪ್ರಕಾಶ್ ಆಗಮನದಿಂದಾಗಿ ಬಿಜೆಪಿಗೆ ಇನ್ನಷ್ಟು ಬಲ ಬರಲಿದೆ. ಆ ಮೂಲಕ ಬರಲಿರುವ ಲೋಕಸಭಾ ಚುನಾವಣೆಯನ್ನು ರಾಜ್ಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಸುಲಭವಾಗಿ ಎದುರಿಸುವ ಮೂಲಕ ಬಿಜೆಪಿಯನ್ನು ಸುಭದ್ರಪಡಿಸಲಾಗುವುದು ಎಂದರು.
ಕಾರ್ಯಕರ್ತರ ಸ್ವಾಗತ ಸ್ವೀಕರಿಸಿ ಮಾತನಾಡಿದ ಬೆಳ್ಳಿಪ್ರಕಾಶ್, ರಾಜ್ಯಮಟ್ಟದಲ್ಲಿ ಬಿಜೆಪಿಯಲ್ಲಿ ಕೆಜೆಪಿ ವಿಲೀನ ಪ್ರಕ್ರಿಯೆ ನಡೆದಿರುವುದು ಉತ್ತಮ ಬೆಳವಣಿಗೆ. ಬರಲಿರುವ ಲೋಕಸಭಾ ಚುನಾವಣೆಯನ್ನು ಯಡಿಯೂರಪ್ಪನವರ ನೇತೃತ್ವದಲ್ಲಿ ಯಶಸ್ವಿಯಾಗಿ ಎದುರಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಾಗುವುದು ಎಂದರು.
ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಪ್ರಕಾಶ್, ಹುಲ್ಲೇಹಳ್ಳಿ ಲಕ್ಷ್ಮಣ್, ತಂಗಲಿ ನಾಗರಾಜ್,ಕೆ.ಜಿ. ಲೋಕೇಶ್ವರ್, ಮಲ್ಲೇಶ್ವರ ವನರಾಜು, ಗಿರೀಶ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

