'ಶ್ರೀನಿವಾಸ್ ಸಾವಿಗೆ ಹಿರೇಮಠ್ ಕಾರಣ'
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದೊಡ್ಡನಂದಿ ಗ್ರಾಮದ ಶ್ರೀನಿವಾಸ್ ಅವರ ಸಾವಿಗೆ ಎಸ್.ಆರ್. ಹಿರೇಮಠ್ ಕಾರಣ ಎಂದು ಕೆಪಿಸಿಸಿ ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್ನ ಉಪಾಧ್ಯಕ್ಷ ಸಚಿನ್ ಮೀಗಾ ಆರೋಪಿಸಿದ್ದಾರೆ.
ಒತ್ತುವರಿದಾರರನ್ನು ಖುಲ್ಲಾಗೊಳಿಸುವಂತೆ ಎಸ್.ಆರ್. ಹಿರೇಮಠ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರಿಂದ ಮುಂದೊಂದು ದಿನ ತಮ್ಮ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಆತಂಕದಿಂದ ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.
ಹಿರೇಮಠ್ ಪರ ವಕೀಲರನ್ನು ಸರ್ಕಾರ ನ್ಯಾಯಾಲಯದ ಅಮಿಕ್ಸ್ ಕ್ಯೂರಿಯಾಗಿ ನೇಮಕ ಮಾಡಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಹಿರೇಮಠ್, ತಮ್ಮ ವಕೀಲರ ಮೂಲಕ ಸರ್ಕಾರಕ್ಕೆ ತಪ್ಪು ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಕೆಲಸ ಮಾಡಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ಅಡ್ವೋಕೇಟ್ ಜನರಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಆಹ್ವಾನ ಇಲ್ಲದೆ ಅವರು ಭಾಗವಹಿಸಿದ್ದರು. ದೊಡ್ಡ ಒತ್ತುವರಿದಾರರನ್ನು ಖುಲ್ಲಾಗೊಳಿಸಬೇಕೆಂದು ಹಿರೇಮಠ್ ಅವರು ಆಗ್ರಹಿಸುವ ಜತೆ ಜತೆಗೆ ಸಣ್ಣ ಒತ್ತುವರಿದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಒತ್ತಡ ಹೇರುತ್ತಿದ್ದಾರೆ. ತಮ್ಮ ಜಮೀನಿನ ಸಮೀಪದ ಒತ್ತುವರಿದಾರರಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿದ್ದು, ಮುಂದೆ ತಮಗೂ ನೋಟೀಸ್ ಬರಬಹುದೆಂಬ ಕಾರಣಕ್ಕೆ ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರೇಮಠ್ ಅವರು ಒತ್ತುವರಿದಾರರ ನೈಜ್ಯವಾದ ಸಮಸ್ಯೆಗಳನ್ನು ಕೋರ್ಟಿಗೆ ಮನವರಿಕೆ ಮಾಡಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ದೂರನ್ನು ನೀಡಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

