ಚಿಕ್ಕಮಗಳೂರು

15ರಂದು ಸಿಎಂ ಜಿಲ್ಲಾ ಪ್ರವಾಸ

Published On :

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.15 ರಂದು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ತರೀಕೆರೆಯ ವಿಜ್ಞಾನ ಇಂಡಸ್ಟ್ರಿಯಲ್‌ನ  ಹೆಲಿಪ್ಯಾಡ್‌ಗೆ ಜಕ್ಕೂರು ಏರೋ ಡ್ರೋಂ ಹೆಲಿಕ್ಯಾಪ್ಟರ್ ಮೂಲಕ ಆಗಮಿಸುವ ಮುಖ್ಯಮಂತ್ರಿಗಳು ತರೀಕೆರೆಯ ಬಯಲು ರಂಗಮಂದಿರದಲ್ಲಿ ತರೀಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ಮಧ್ಯಾಹ್ನ 2.30 ಕ್ಕೆ ಕಡೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 3 ಗಂಟೆಗೆ ಕಡೂರು ಎಪಿಎಂಸಿ ಆವರಣದಲ್ಲಿ ಗುರುಸಿದ್ದರಾಮೇಶ್ವರರ 841 ನೇ ಜಯಂತಿ ಮಾಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ನಂತರ ಸಂಜೆ 5.30 ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.
'ವಿದ್ಯೆ ಜಾತಿಗೆ  
ಸೀಮಿತ ಸಲ್ಲ'
ಶೃಂಗೇರಿ:  ವಿದ್ಯೆ, ಸಂಪತ್ತು ಎಲ್ಲಾ ಜನರಿಗೆ ಸಿಗಬೇಕು, ಧರ್ಮ ಕೇವಲ ಜಾತಿ, ಗುಂಪುಗಳಿಗೆ ಸೀಮಿತವಾಗಿರದೆ ಸಮಾಜದ ಕಟ್ಟಕಡೆಯ ಜನರಿಗೂ ತಲುಪುವಂತಾಗಬೇಕು ಎಂದು ಉಡುಪಿ ಪೇಜಾವರ ಮಠದ ಪೀಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆಯುತ್ತಿರುವ ಚುಂಚೋತ್ಸವ ಹಾಗೂ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 70ನೇ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧೀಶ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಸಾನಿದ್ಯ ವಹಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಕೆ.ವಿ.ಆರ್. ಠಾಗೂರ್, ನಟಿ ಗಿರಿಜಾ ಲೋಕೇಶ್, ಪ್ರೊ. ಕೃಷ್ಣೇಗೌಡ, ಆದಿಚಂಚನಗಿರಿ ಶಾಖಾ ಮಠದ ಶ್ರೀಗುಣನಾಥ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.
13ರಂದು ಉರೂಸ್
ಶೃಂಗೇರಿ:  ಪಟ್ಟಣದ ಗೋರಿಗುಡ್ಡೆಯಲ್ಲಿ ಇರುವ ಸೂಫಿ ಸಂತ ಮೆಹಬೂಬ್ ಔಲಿಯಾ ದರ್ಗಾದಲ್ಲಿ ಜ.13ರಂದು ವಾರ್ಷಿಕ ಉರೂಸ್ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆಯಿಂದ ಉರೂಸ್ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ. ಖುರಾನ್ ಖ್ವಾನಿ, ಮೌಲೂದ್, ದರ್ಗಾದ ಆವರಣದಲ್ಲಿ ಝರಬ್‌ನೊಂದಿಗೆ ಸಂದಲ್ ಮೆರವಣಿಗೆ, ಪಾತೇಹ ಸಲಾಂ, ರಾತ್ರಿ ಬೆಂಗಳೂರಿನ ತೌಸಿಫ್ ಮಜೀದ್ ಖಾದ್ರಿ ಸಂಗಡಿಗರು, ಹೈದರಾಬಾದಿನ ಅಹ್ಮದ್ ಇರ್ಫಾನ್ ಸಂಗಡಿಗರ ಖವ್ವಾಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.