ಚಿಕ್ಕಮಗಳೂರು

ಪಶ್ಚಿಮಘಟ್ಟದ ಸಸ್ಯ ಪ್ರಬೇಧ ಬೆಳೆಸಿ

Published On :

ತ್ಯಾಗರ್ತಿ:  ಪಶ್ಚಿಮ ಘಟ್ಟದಲ್ಲಿ ಮರೆಯಾಗುತ್ತಿರುವ ಸಸ್ಯ ಪ್ರಬೇಧಗಳನ್ನು ಗುರುತಿಸಿ ಅವುಗಳನ್ನು ಅರಣ್ಯದಲ್ಲಿ ಬೆಳೆಸಲು ಉತ್ತೇಜನ ನೀಡಬೇಕೆಂದು ಶ್ರೀವೀರಾಪುರ ಹೀರೇಮಠದ ಡಾ.ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸಾಗರ ತಾಲೂಕು ಹಿರೇಬಿಲಗುಂಜಿ ಗ್ರಾಪಂ ವ್ಯಾಪ್ತಿಯ ವೀರಾಪುರದಲ್ಲಿ ಶಿರಸಿಯ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ರೇಂಜ್ ಅಟ್ಯಾಚ್ಮೆಂಟ್ ಬಗ್ಗೆ ಪ್ರಾಯೋಗಿಕ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿ, ಈ ಅರಣ್ಯದಲ್ಲಿ ನಿತ್ಯಹರಿದ್ವರ್ಣದ ಮರ ಬೆಳೆಸಿ ಉಳಿಸುವಲ್ಲಿ ಬದ್ಧರಾಗಿರಬೇಕಿದೆ. ಸರ್ಕಾರಿ ಜಾಗದಲ್ಲಿ ಅರಣ್ಯ ಬೆಳೆಸಲು ಮುಂದಾಗಬೇಕು. ಜನರಿಗೆ ಉಚಿತವಾಗಿ ಅರಣ್ಯ ಸಸ್ಯಗಳನ್ನು ಸರ್ಕಾರದಿಂದ ನೀಡಿ ತಮ್ಮ ಜಮೀನಿನಲ್ಲಿ ಬೆಳೆಸಲು ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು. ಸಾಗರ ವಲಯದ ಸಾಮಾಜಿಕ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣಕುಮಾರ್ ಮಾತನಾಡಿದರು. ಶಿರಸಿಯ ಅರಣ್ಯ ಮಹಾವಿದ್ಯಾಲಯದ 60 ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರತ್ನಮ್ಮ, ಸದಸ್ಯ ಕೃಷ್ಣಮೂರ್ತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಷ್ಪಕ್ ಅಹಮದ್, ಉದ್ಯೋಗ ಖಾತ್ರಿ ಸಹಾಯಕ ಶ್ರೀನಿವಾಸ್ ಎಚ್.ಆರ್., ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.