ಚಿಕ್ಕಮಗಳೂರು

ರಸ್ತೆ ಅಗಲೀಕರಣಕ್ಕೆ ಮೀನಮೇಷ ಬೇಡ

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಜ.11
ಪಟ್ಟಣದ ಕಡೂರು-ಮಂಗಳೂರು ರಸ್ತೆ ಅಗಲೀಕರಣ ರಸ್ತೆಯ ಮಧ್ಯಭಾಗದಿಂದ 45-45 ಅಡಿ ಸೇರಿ ಒಟ್ಟು 90 ಅಡಿಗೆ ಗುರುತಿಸಿ ವರ್ಷ ಕಳೆದಿದೆ. ಆದರೂ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮ ಜರುಗಿಸಲು ಮೀನಮೇಷ ಎಣಿಸುತ್ತಿದ್ದರೆ, ಮತ್ತೊಂದು ಕಡೆ ಪಟ್ಟಣ ಪಂಚಾಯಿತ್ ಸದಸ್ಯರು ರಸ್ತೆ ಅಗಲೀಕರಣಕ್ಕೆ ಯಾವುದೇ ಹಣ ಬಿಡುಗಡೆಯಾಗಿಲ್ಲ ಎಂದು ಉತ್ತರ ನೀಡಿ ಸಾರ್ವಜನಿಕರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಕರವೇ ಗೌರವಾಧ್ಯಕ್ಷ ರಘುನಾಥ್ ಹೊರಟ್ಟಿ ತಿಳಿಸಿದ್ದಾರೆ.
ಕರವೇ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ವಾಹನಗಳ ದಟ್ಟಣೆ ಅತಿಯಾಗಿದೆ. ಪಾರ್ಕಿಂಗ್ ಸಮಸ್ಯೆ ಉಲ್ಪಣ ಆಗುವುದರೊಂದಿಗೆ, ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗಿದೆ. ಈ ಬಗ್ಗೆ ಹಿಂದಿನ ಶಾಸಕ ಎಂ.ಪಿ.ಕುಮಾರಸ್ವಾಮಿ ಮತ್ತು ಹಾಲಿ ಶಾಸಕ ಬಿ.ಬಿ. ನಿಂಗಯ್ಯ ಅವರ ನೇತೃತ್ವದಲ್ಲಿ ಸಾರ್ವಜನಿಕರ ಸಭೆ ಕರೆಯುವುದರ ಮೂಲಕ ಸಾರ್ವಜನಿಕರ ಒತ್ತಾಯದಂತೆ ರಸ್ತೆಯ ಎರಡು ಬದಿಗಳಿಂದ ಒಟ್ಟು 90 ಅಡಿ ಅಗಲೀಕರಣ ನಡೆಸಲು ಸಭೆಯಲ್ಲಿ ತಿರ್ಮಾನಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ವರ್ಷಗಳೇ ಕಳೆಯುತ್ತಾ ಬಂದರೂ ರಸ್ತೆ ಅಗಲೀಕರಣ ಮಾತ್ರ ನೆನೆಗುದಿಗೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಲೋಕೋಪಯೋಗಿ ಇಲಾಖೆ ಅಧಿಕಾರಿ ನಾರಾಯಣ ಮಲ್ಯ ಪ್ರವಾಸಿ ಮಂದಿರದ ಕಾಂಪೌಂಡ್ ತೆರವುಗೊಳಿಸಿದ್ದರ ಬೆನ್ನಲ್ಲೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಲತಾ ಲಕ್ಷ್ಮಣ್ ತಮ್ಮ ಕಟ್ಟಡವನ್ನು ತೆರವುಗೊಳಿಸಿದರು. ಆದರೆ,  ಅಧಿಕಾರಿಗಳು ಪಪಂ ಅಂಗಡಿ ಮಳಿಗೆಗಳು, ತಾಪಂ ಕಾಂಪೌಂಡ್, ಬಾಲಕರ ವಸತಿ ಗೃಹಗಳನ್ನು ತೆರವುಗೊಳಿಸಲು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಸನ್ನ ಗೌಡ, ಧರ್ಮವೀರ್, ಬಾಲು, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.