ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಸಂಸ್ಥೆಗಳು ಪೂರಕ: ಶ್ರೀ
ಬಾಳೆಹೊನ್ನೂರು: ಶಿಕ್ಷಣ ಸಂಸ್ಥೆಗಳೇ ನಿಜವಾದ ದೇವಸ್ಥಾನವಾಗಿದ್ದು, ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಸಂಸ್ಥೆಗಳು ಪೂರಕ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದ್ದಾರೆ.
ಇಲ್ಲಿನ ಕಲಾರಂಗ ಕ್ರೀಡಾಂಗಣದಲ್ಲಿ ಬಾಳೆಹೊನ್ನೂರು ವಿದ್ಯಾಸಂಸ್ಥೆ ಶುಕ್ರವಾರ ಹಮ್ಮಿಕೊಂಡಿದ್ದ ಸುವರ್ಣ ಸಂಭ್ರಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಸಮಾಜಕ್ಕೆ ಉತ್ತಮ ಅಕ್ಷರಸ್ಥರನ್ನು ನೀಡಿದಾಗ ಮಾತ್ರ ಉದ್ಧಾರವಾಗುವುದಿಲ್ಲ. ಆ ಅಕ್ಷರಸ್ಥರು ವಿಕಸಿತ ಜ್ಞಾನವನ್ನು ಬೆಳೆಸಿಕೊಂಡಾಗ ಸಮಾಜದ ಬೆಳವಣಿಗೆಯಾಗುತ್ತದೆ. ದೈವತ್ವದ ಅರಿವಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದ ಅವರು, ಬದುಕಿನಲ್ಲಿ ವೈಚಾರಿಕತೆ ನಿಂತರೆ ನಮ್ಮ ಜ್ಞಾನ ತೋರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಮಠಗಳಿಂದ ಶಿಕ್ಷಣಕ್ಕೆ ಒತ್ತು: ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ವ್ಯವಸ್ಥೆ ಬದಲಾದಾಗ ರೀತಿ ನೀತಿಗಳನ್ನು ಬದಲಾಯಿಸಿಕೊಳ್ಳಬಹುದು. ಉತ್ತಮ ಶಿಕ್ಷಣದಿಂದ ಉತ್ತಮ ಹುದ್ದೆಗಳನ್ನು ಗಳಿಸಲು ಸಾಧ್ಯ. ನಮ್ಮ ದೇಶದಲ್ಲಿ ಸರ್ಕಾರಗಳು ಶಿಕ್ಷಣಕ್ಕೆ ಎಷ್ಟು ಒತ್ತು ನೀಡುತ್ತಿವೆಯೇ ಅದಕ್ಕಿಂತ ಹೆಚ್ಚಿನ ಒತ್ತನ್ನು ಮಠ, ಮಾನ್ಯಗಳು ನೀಡುತ್ತಿವೆ. ಇದರಿಂದ ಭಾರತಕ್ಕೆ ಜಗತ್ತಿನಲಿ ಮೂರನೇ ಸ್ಥಾನವಿದೆ ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಬಿ.ಸಿ. ಗೀತಾ ಮಾತನಾಡಿ, ಸೇವಾ ಮನೋಭಾವದಿಂದ ವಿದ್ಯಾರ್ಜನೆಯನ್ನು ಸಂಸ್ಥೆ ನೀಡುತ್ತಿದ್ದು, 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿದ್ದಾರೆ ಎಂದರು.
ಸನ್ಮಾನ: ಸಮಾರಂಭಕ್ಕೂ ಮುನ್ನ ನಿರ್ಮಲಾನಂದನಾಥ ಸ್ವಾಮೀಜಿ ವಿದ್ಯಾಸಂಸ್ಥೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ನಿವೃತ್ತ ಉಪ ಪ್ರಾಚಾರ್ಯ ಟಿ.ಆರ್. ನಾಗಪ್ಪಗೌಡ ಸಂಪಾದತ್ವದ ಸುವರ್ಣ ಸಂಭ್ರಮ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ದಾನಿಗಳಿಗೆ ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಆರ್. ವೆಂಕಪ್ಪಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಫಿ ಬೆಳೆಗಾರ ಎಚ್.ಬಿ. ರಾಜಗೋಪಾಲ್, ಬಿ.ಎಂ. ಶಿವಣ್ಣಗೌಡ, ಎಐಟಿ ಕಾಲೇಜಿನ ಪ್ರಾಚಾರ್ಯ ಡಾ. ಸಿ.ಕೆ. ಸುಬ್ಬರಾಯ, ಪ್ರಾಚಾರ್ಯ ಪುರುಷೋತ್ತಮ್, ಟಿ.ಆರ್. ನಾಗಪ್ಪಗೌಡ, ಎಸ್. ಕೃಷ್ಣಾನಾಯಕ್ ಇದ್ದರು.
ಕ್ರಿಕೆಟ್ ಪಂದ್ಯಾವಳಿ
ಚಿಕ್ಕಮಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಜ. 17 ರಂದು ಖೇಲೇಗಾ ಯುವ ಜಿತೇಗಾ ಭಾರತ್ ನಮೋ ಕಪ್- 2014 ಅಭಿಯಾನದಲ್ಲಿ ಚಿಕ್ಕಮಗಳೂರು ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಒಟ್ಟು 10 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

