'ನಕಾರಾತ್ಮಕ ಭಾವನೆ ನಿವಾರಿಸಿ'
ಸಾಗರ: ಮಕ್ಕಳ ಮನಸ್ಸಿನಲ್ಲಿರುವ ನಕಾರಾತ್ಮಕ ಭಾವನೆಯನ್ನು ಹೋಗಲಾಡಿಸಿ ಅಲ್ಲಿ ಸಕಾರಾತ್ಮಕ ಭಾವನೆ ಮೂಡಿಸುವಂತಹ ಕೆಲಸವನ್ನು ಶಿಕ್ಷಕರು ಹಾಗೂ ಪೋಷಕರು ಒಟ್ಟಾಗಿ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಡಾ.ಉದಯಕುಮಾರ್ ಶೆಟ್ಟಿ ಹೇಳಿದರು. ಇಲ್ಲಿನ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳ ಎದುರು ಅನಗತ್ಯ ಮಾತುಕತೆ, ಸಹ್ಯವಲ್ಲದ ಚಟುವಟಿಕೆ ನಡೆಯಬಾರದು. ಇದು ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು. ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷ ಹರೀಶ್ ಗಂಟೆ, ಮಕ್ಕಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳು ಹೆತ್ತ ತಂದೆತಾಯಿಗಿಂತ ಶಿಕ್ಷಕರನ್ನು ಹೆಚ್ಚು ನಂಬುತ್ತಾರೆ. ಅನೇಕ ಸಂದರ್ಭದಲ್ಲಿ ಅನುಸರಿಸುತ್ತಾರೆ. ಈ ನೆಲೆಯಲ್ಲಿ ಶಿಕ್ಷಕರ ವರ್ತನೆ ಮಕ್ಕಳ ಮನಸ್ಸಿನ ಮೇಲೆ ನೆಲೆಯೂರುವಂತಹದ್ದಾಗಿರಬೇಕು ಎಂದು ಹೇಳಿದರು. ತಾಪಂ ಇಒ ಟಿ.ಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಲಿಂಗಪ್ಪ, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಎನ್. ಗಾವಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ. ಕೃಷ್ಣಪ್ಪ, ಕಾರ್ಯದಶರ್ ಶರಣಪ್ಪ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಡಿ. ಗಣಪತಪ್ಪ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

