ಸಂಭ್ರಮದ ವೈಕುಂಠ ಏಕಾದಶಿ
ಚಿಕ್ಕಮಗಳೂರು: ನಗರದ ವೆಂಕಟೇಶ್ವರಸ್ವಾಮಿ, ಹಿರೇಮಗಳೂರಿನ ಕೋದಂಡರಾಮಚಂದ್ರ ಸ್ವಾಮಿ ದೇವಾಲಯಗಳಲ್ಲಿ ಶನಿವಾರ ವೈಕುಂಠ ಏಕಾದಶಿ ಉತ್ಸವ ನಡೆಯಿತು. ವೈಕುಂಠ ಏಕಾದಶಿ ಅಂಗವಾಗಿ ಕೋದಂಡರಾಮಚಂದ್ರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಈ ವೈಭವ ನೋಡಲು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದೇವರ ದರ್ಶನ ಪಡೆಯಲು ಭಕ್ತರು ಬೆಳ್ಳಂಬೆಳಗ್ಗೆ ಅಪಾರ ಸಂಖ್ಯೆಯಲ್ಲಿ ಬರುವುದು ಕಂಡು ಬಂದಿತು. ಭಕ್ತರ ಸಂಖ್ಯೆ ಅಧಿಕವಾಗುತ್ತಿದ್ದಂತೆ ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ಸರದಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು. ನಗರದ ವಿಜಯಪುರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದ ಸಮೀಪದಲ್ಲಿರುವ ಶ್ರೀದೇವಿ ಭೂದೇವಿ ಸಹಿತ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲೂ ಭಕ್ತರ ಸಂಖ್ಯೆ ಅಧಿಕವಿತ್ತು. ಈ ಬಾರಿ ದೇವರ ಉತ್ಸವ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು, ಈ ವೈಭವವನ್ನು ನೋಡಲು ಸರದಿ ಸಾಲಿನಲ್ಲಿ ನಿಂತು ದೇವಾಲಯ ಪ್ರವೇಶಿಸಿದರು. ಇಲ್ಲಿನ ಆಂಜನೇಯ ಸ್ವಾಮಿ ದೇವಾಲಯದವರೆಗೆ ಭಕ್ತರು ಸರದಿಯಲ್ಲಿ ನಿಂತಿರುವುದು ಕಂಡು ಬಂದಿತು. ವೈಕುಂಠ ಏಕಾದಶಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

