ಚಿಕ್ಕಮಗಳೂರು

ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ

Published On :

ನರಸಿಂಹರಾಜಪುರ:  ಸ್ವಾಮಿ ವಿವೇನಾದಂರ ಆದರ್ಶಗಳು ಪಾಲಿಸಿದರೆ ಅವಿವೇಕಿಗಳು ಸಹ ವಿವೇಕಿಗಳಾಗುತ್ತಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥ ನಿಜಾಮುದ್ದೀನ್ ಹೇಳಿದರು. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ 2013-14 ನೇ ಸಾಲಿನ ಸಾಂಸ್ಕೃತಿಕ ಮತ್ತು ರಾಷ್ಚೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭ, ಸ್ವಾಮಿ ವಿವೇಕಾನಂದರ 151ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಮಾರಂಭವನ್ನು ಉದ್ಘಾಟಿಸಿದ ತಾಪಂ ಅಧ್ಯಕ್ಷ ಜೆ.ಜಿ.ನಾಗರಾಜ್, ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಹೊರ ಹಾಕಲು ಇಂತಹ ವೇದಿಕೆಗಳು ಉತ್ತಮ ಅವಕಾಶವಾಗಿದೆ. ಸಾಂಸ್ಕೃತಿಕ, ಕ್ರೀಡೆಗಳಲ್ಲಿ ಭಾಗವಹಿಸಿದರೆ ವಿದ್ಯಾರ್ಥಿಗಳ ಪ್ರತಿಭೆಗಳು ಮತ್ತಷ್ಚು ಬೆಳವಣಿಗೆ ಹೊಂದುತ್ತದೆ ಎಂದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಸರ್ವಮಂಗಳಮ್ಮ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿ.ಯು.ಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಜಯ್, ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಮೇಘಶ್ರೀ, ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಪಿ.ಜೆ.ಪೆನ್ನಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.