'ಎನ್ಡಿಎ ಸಾಧನೆ ಮನೆಮನೆ ತಲುಪಲಿ'
ಕ.ಪ್ರ.ವಾರ್ತೆ, ತರೀಕೆರೆ, ಜ.12
ಮಾಜಿ ಪ್ರಧಾನಿ ಎ.ಬಿ. ವಾಜಪೇಯಿ ಅವರ ನೇತೃತ್ವದ ಸರ್ಕಾರ ಕೈಗೊಂಡ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕೆಂದು ಭಾರತೀಯ ಜನತಾ ಪಾರ್ಟಿ ತಾಲೂಕು ಅಧ್ಯಕ್ಷ ಮೋಹನ್ಕುಮಾರ್ ಕರಕುಚ್ಚಿ ತಿಳಿಸಿದ್ದಾರೆ.
ತಾಲೂಕು ಭಾರತೀಯ ಜನತಾ ಪಾರ್ಟಿ ವತಿಯಿಂದ ಭಾನುವಾರ ಸಮೀಪದ ಲಕ್ಕವಳ್ಳಿ ಪಾಂಡರಂಗ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಹೋಬಳಿ ಬೂತ್ಮಟ್ಟದ ಶಕ್ತಿ ಕೇಂದ್ರದ ಕಾರ್ಯಕರ್ತ ಸಭೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮನೆಮನೆ ತಲುಪಲಿ: ವಾಜಪೇಯಿ ಅವರ ಅಡಳಿತದ 6 ವರ್ಷಗಳಲ್ಲಿ 22,842 ಕಿ.ಮೀ. ರಸ್ತೆ ನಿರ್ಮಾಣ, ಗಡಿ ಭದ್ರತೆ, ಸ್ವಚ್ಛ ಗ್ರಾಮ, ಸ್ವಜಲಧಾರಾ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಸೈನಿಕರಿಗೆ ಭದ್ರತೆ, ರಾಷ್ಟ್ರೀಯ ಸಂಪತ್ತು ಉಳಿಸುವಂತಹ ಹಾಗೂ ನದಿ ಜೋಡಣೆಯಂತಹ ಮಹಾನ್ ಕಾರ್ಯಕ್ಕೆ ಚಾಲನೆ ನೀಡಿದ ಕೀರ್ತಿ ವಾಜಪೇಯಿ ಅವರ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಸಂದಿದೆ. ಈ ಎಲ್ಲ ಸಾಧನೆ ಪ್ರತಿ ಗ್ರಾಮಗಳ ಪ್ರತಿ ಮನೆಗೂ ತಲುಪಿಸಬೇಕೆಂದು ಅವರು ತಿಳಿಸಿದರು.
ಶಕ್ತಿಮೀರಿ ಶ್ರಮಿಸಿ: ರಾಜ್ಯ ಬಿಜೆಪಿ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಮುದುಗುಂಡಿ ಲೋಹಿತ್ ಮಾತನಾಡಿ, ನರೇಂದ್ರ ಮೋದಿಯವರನ್ನು ದೇಶದ ಭವಿಷ್ಯದ ಹಿತದೃಷ್ಟಿಯಿಂದ ದೇಶದ ಪ್ರಧಾನಿಯನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಿನಿಂದ ಶಕ್ತಿ ಮೀರಿ ಶ್ರಮಿಸಬೇಕೆಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್.ದೇವಾನಂದ್ ಮಾತನಾಡಿ, ಬೂತ್ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುವುದು, ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಬೃಹತ್ ಏಕತಾ ಪ್ರತಿಮೆ ನಿರ್ಮಿಸಲು ಪ್ರತಿ ಪಂಚಾಯಿತಿಯಲ್ಲಿ 1 ಕೆಜಿ ಲೋಹ, ಅರ್ಧ ಕೆಜಿ ಮಣ್ಣನ್ನು ಸಂಗ್ರಹಿಸುವ ಕಾರ್ಯದಲ್ಲಿ ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.
ಮಾಜಿ ಶಾಸಕ ಟಿ.ಎಚ್.ಶಿವಶಂಕರಪ್ಪ ಮಾತನಾಡಿದರು. ತಾಲೂಕು ಯುವ ಮೋರ್ಚಾ ಅಧ್ಯಕ್ಷ ಅಜಯ್ಕುಮಾರ್, ಶಕ್ತಿ ಕೇಂದ್ರದ ಅಧ್ಯಕ್ಷ ಷಣ್ಮುಗಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಸದಾನಂದ್, ತಾಲೂಕು ಉಪಾಧ್ಯಕ್ಷ ಅರವಿಂದ್ ಪಕ್ಷದ ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

