ಚಿಕ್ಕಮಗಳೂರು

ಕಡೂರಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ

Published On :

ಚಿಕ್ಕಮಗಳೂರು: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಕಡೂರಿನಲ್ಲಿ ನಡೆಸಲು ಕಸಾಪ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ನಾ.ಸು. ಶಿವಸ್ವಾಮಿ ತಿಳಿಸಿದ್ದಾರೆ.
ಜಿಲ್ಲೆಯ 6 ತಾಲೂಕುಗಳಲ್ಲಿ ಈ ಕೆಳಕಂಡ ದಿನಾಂಕಗಳಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಜ.18, 19ರಂದು ಶೃಂಗೇರಿ ತಾಲೂಕು ಸಮ್ಮೇಳನವನ್ನು ಶೃಂಗೇರಿಯಲ್ಲಿ, ಮಾರ್ಚ್ ಮೊದಲ ವಾರದಲ್ಲಿ ಚಿಕ್ಕಮಗಳೂರು ತಾಲೂಕು ಸಮ್ಮೇಳನ ಅಂಬಳೆಯಲ್ಲಿ, ಕೊಪ್ಪ ತಾಲೂಕು ಸಮ್ಮೇಳನವನ್ನು ಕೊಪ್ಪ ತಾಲೂಕಿನ ಬಸರಿಕಟ್ಟೆಯಲ್ಲಿ ಫೆಬ್ರವರಿಯಲ್ಲಿ, ನರಸಿಂಹರಾಜಪುರ ತಾಲೂಕಿನ ಸಮ್ಮೇಳನವನ್ನು ಸೀತೂರಿನಲ್ಲಿ ಫೆಬ್ರವರಿ 14 ಮತ್ತು 15 ರಂದು ಹಾಗೂ ಮೂಡಿಗೆರೆ ತಾಲೂಕು ಸಮ್ಮೇಳನವನ್ನು ಕಳಸದಲ್ಲಿ ಫೆಬ್ರವರಿ ಮಾಹೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲೆಯ ಬಹುತೇಕ ಹೋಬಳಿಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.