ಚಿಕ್ಕಮಗಳೂರು

ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ

Published On :

ತರೀಕೆರೆ: ಯುವಕರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎಸ್.ಎನ್. ಲೋಹಿತ್ ತಿಳಿಸಿದ್ದಾರೆ.
ಪ್ರವಾಸಿ ಮಂದಿರದಲ್ಲಿ ತರೀಕೆರೆ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ಗೆ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಯುವ ಕಾಂಗ್ರೆಸ್‌ನಲ್ಲಿ 31 ಸಾವಿರ ಪ್ರತಿನಿಧಿಗಳಿದ್ದು, ನಾಲ್ಕೂವರೆ ಲಕ್ಷ ಸದಸ್ಯತ್ವವನ್ನು ಹೊಂದಲಾಗಿದೆ. ಯುವಕರಲ್ಲಿ ಬದಲಾವಣೆ ತರಬೇಕು, ರಾಹುಲ್ ಗಾಂಧಿಯವರನ್ನು ಪ್ರಧಾನಿಯವರನ್ನಾಗಿ ಮಾಡಬೇಕು ಎಂದು ತಿಳಿಸಿದ ಅವರು, ವಿಧಾನ ಸಭಾ ಕ್ಷೇತ್ರಕ್ಕೆ ತಾವು ಅಧ್ಯಕ್ಷರಾಗಿ ಮರು ಆಯ್ಕೆಯಾಗಲು ಸಹಕರಿಸಿದ ಯುವ ಕಾಂಗ್ರೆಸ್ ಪಕ್ಷದ ಎಲ್ಲ ಸದಸ್ಯರಿಗೂ, ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ನ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎರೆಹಳ್ಳಿ ಪರಮೇಶ್ ಮಾತನಾಡಿದರು.
ವಿಧಾನಸಭಾ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿ ಟಿ.ಜೆ. ಉಮಾಶಂಕರ್, ಎಸ್.ಎಂ. ವಿನಯ್, ರವಿಕುಮಾರ್ ಎಲ್.ಜಿ. ಬೈರೇಶ್, ಸದಾಶಿವ, ಯುವ ಕಾಂಗ್ರೆಸ್ ಪಕ್ಷದ ಸದಸ್ಯರು ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.