15 ರಂದು ತರೀಕೆರೆಗೆ ಮುಖ್ಯಮಂತ್ರಿ
ಕ.ಪ್ರ.ವಾರ್ತೆ, ತರೀಕೆರೆ, ಜ.12
ಪಟ್ಟಣಕ್ಕೆ ಜ.15ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವರು. ತಾಲೂಕು ಅಡಳಿತ, ತಾ.ಪಂ. ಹಾಗೂ ವಿವಿಧ ಇಲಾಖೆಗಳ ವತಿಯಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ವಿ.ಎಲ್. ವಿಜಯಕುಮಾರ್ ತಿಳಿಸಿದ್ದಾರೆ.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಜೊತೆಯಲ್ಲಿ ಕೇಂದ್ರ ಸಚಿವರಾದ ಆಸ್ಕರ್ ಫರ್ನಾಂಡೀಸ್, ಚಂದ್ರೇಶ್ ಕುಮಾರಿ ಕಾಟೋಜ್, ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದರು.
ಮುಖ್ಯಮಂತ್ರಿಗಳ ಭೇಟಿ ಸಮಯದಲ್ಲಿ ತಾಲೂಕಿನ ಹಲವಾರು ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ, ಅನುದಾನಗಳ ಬಗ್ಗೆ ಚರ್ಚಿಸಲಾಗುವುದು. ಇದರಿಂದ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ದೊರೆಯಲಿದೆ. ಶಾಸಕ ಜಿ.ಎಚ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ತಾಲೂಕಿನಲ್ಲಿ ತೆಂಗು ಬೆಳೆಗೆ ತಗುಲಿರುವ ರೋಗ, ಅಡಕೆ ಹಳದಿ ರೋಗ, ಮಲೆನಾಡು ಭಾಗದಲ್ಲಿ ಭೂಮಿ ಒತ್ತುವರಿ ವಿಚಾರ, ಬರಗಾಲದ ಸಮೀಕ್ಷೆ ಇತ್ಯಾದಿ ಎಲ್ಲ ವಿಚಾರಗಳನ್ನು ಬಗೆಹರಿಸುವತ್ತ ಪಕ್ಷ ದಾಪುಗಾಲು ಹಾಕುತ್ತಿದೆ ಎಂದ ಅವರು, ಲೋಕಸಭಾ ಚುನಾವಣೆ ಕೂಡ ಇರುವುದರಿಂದ ಸರ್ಕಾರದ ಹೊಸ ಯೋಜನೆಗಳನ್ನು ಜನರಿಗೆ ತಿಳಿಸಬೇಕಿದೆ ಎಂದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಿಂದ ತಾಲೂಕಿನ ವಿವಿಧ ಕೆರೆಗಳಿಗೆ ನೀರು ಹಾಯಿಸಲಾಗುವುದು, ಮುಖ್ಯಮಂತ್ರಿಗಳ ಭೇಟಿ ಸಮಯದಲ್ಲಿ ತಾಲೂಕಿನ ಹಲವಾರು ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅದರ ಪರಿಹಾರಕ್ಕೆ ಸೂಕ್ತ ರೀತಿಯಲ್ಲೂ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ಪುರಸಭಾ ಸದಸ್ಯರು, ತಾ.ಪಂ. ಅಧ್ಯಕ್ಷೆ ಶಕುಂತಲ ನಾಗರಾಜ್, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ಧ್ರುವಕುಮಾರ್, ಪರಶುರಾಮ್, ಮಹೇಶ್ವರಪ್ಪ, ವೆಂಕಟೇಶ ನಾಯ್ಡು, ಶಿವಕುಮಾರ್, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತಿರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

