ಕುವಿವಿ: ಬಿಬಿಎಂ ಫಲಿತಾಂಶ ಪ್ರಕಟ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ಬಿಬಿಎಂ ಪದವಿ ಫಲಿತಾಂಶವನ್ನು ಜ.13ರಂದು ಅಂತರ್ಜಾಲ ತಾಣದಲ್ಲಿ ಪ್ರಕಟಿಸಲಾಗಿದ್ದು, ಎಸ್ಎಂಎಸ್ ಮೂಲಕವೂ ಫಲಿತಾಂಶ ಪಡೆಯಬಹುದು ಎಂದು ಪರೀಕ್ಷಾಂಗ ಕುಲಸಚಿವ ಎಚ್.ಎಸ್. ಭೋಜ್ಯಾನಾಯ್ಕ ತಿಳಿಸಿದ್ದಾರೆ. ಎಸ್ಎಂಎಸ್ ಮೂಲಕ ಫಲಿತಾಂಶ ಪಡೆಯಲು ಔಕಎಡಠಛ್ಛಜಓ್ಖಖಡಠಛ್ಛಜಖಜ್ಜ್ಝಡಡಿಜ್ಠಃ್ಟಡಠಛ್ಛಜಖಜಟ್ಝಡಡಿಜ್ಠ ಟೈಪ್ ಮಾಡಿ 56070 ನಂಬರ್ಗೆ ಮೊಬೈಲ್ ಮೂಲಕ ಸಂದೇಶ ಕಳುಹಿಸಿ ಫಲಿತಾಂಶ ಪಡೆಯಬಹುದು. (ಉದೆ- ಔಕಎ ಓ್ಖಖ ಆ13001011) ಇದಲ್ಲದೇ ಢಿಢಿಢಿ.್ಞ್ಡಢಜಠಟ್ಡ.ಛ್ಛ.್ಝಟಿ, ಢಿಢಿಢಿ.್ಞ್ಡಡ.ಟ್ಟ್ಜ್ಝಡಣಡ.್ಟ್ಠ್ಜ, ಢಿಢಿಢಿ.ಟ್ಟ್ಜ್ಝಡಣಡ.ಟಿಜಡಿ.್ಝಟಿಣಢಿಜಛ್ಠಿಜಡ್ಡಟಡಿಣ್ಞ್ಡಡ ತಾಣಗಳಲ್ಲಿಯೂ ಫಲಿತಾಂಶ ಪಡೆಯಬಹದು.
ಮಹಾಪುರುಷರ ಸಾಧನೆ ಬದುಕಿನಲ್ಲಿ ಅಳವಡಿಸಿಕೊಳ್ಳಿ
ಚಿಕ್ಕಮಗಳೂರು: ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ವೀರಸನ್ಯಾಸಿ ಸ್ವಾಮಿ ವಿವೇಕಾನಂದ ಅವರ ತತ್ವ, ಸಂದೇಶ, ಸಾಧನೆ ಮತ್ತು ಮಾನವೀಯ ಮೌಲ್ಯಗಳಿಂದಾಗಿ ಇಂದಿಗೂ ಜನಮಾನಸದಲ್ಲಿ ಸ್ಥಿರವಾಗಿ ನೆಲೆಸಿದ್ದಾರೆ ಎಂದು ನಗರಸಭಾ ಸದಸ್ಯ ಎಚ್.ಎಸ್. ಪುಟ್ಟಸ್ವಾಮಿ ಹೇಳಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ನೆಹರು ಯುವಕೇಂದ್ರ, ಯುವ ಸಬಲೀಕರಣ, ಕ್ರೀಡಾ ಇಲಾಖೆ, ನಾದಚೈತನ್ಯ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಯುವ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಆರಂಭಗೊಂಡ ರಾಷ್ಟ್ರೀಯ ಯುವ ಸಪ್ತಾಹಕ್ಕೆ ನಗರದ ಸ್ಕೌಟ್ಸ್ ಭವನದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಆದರ್ಶ ಪಾಲಿಸಿ: ವಿವೇಕಾನಂದರ ಬದುಕು ಸಾಧನೆ ಮತ್ತು ಸಂದೇಶಗಳ ಕುರಿತು ಉಪನ್ಯಾಸ ನೀಡಿದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಧ್ರುವಕುಮಾರ್ ವಿವರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಾದಚೈತನ್ಯ ಅಧ್ಯಕ್ಷ ಶಂಕರನಾರಾಯಣ ಭಟ್, ಮಹಾಪುರುಷರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಸ್ವಲ್ಪಮಟ್ಟಿಗಾದರೂ ಅಳವಡಿಸಿಕೊಂಡರೆ ಅವರ ಜಯಂತಿ ಆಚರಣೆಗಳಿಗೆ ಅರ್ಥ ಬರುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಮಂಜುನಾಥ್, ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಇಂದಿನಿಂದ ಒಂದು ವಾರ ಕಾಲ ರಾಷ್ಟ್ರೀಯ ಯುವ ಸಪ್ತಾಹ ಆಚರಿಸಲಾಗುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರತಿದಿನ ಕಾರ್ಯಕ್ರಮಗಳು ನಡೆಯಲಿವೆ. ಕಡೂರು ತಾಲೂಕಿನ ಕಾಮನಕೆರೆಯಲ್ಲಿ ಸಮಾರೋಪ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.
ಇದೇ ವೇಳೆ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾರ್ದನಿ ಯುವ ಸಂಘಟನೆ ಉದ್ಘಾಟಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

